ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ನ್ಯಾಯಾಲಯದಿಂದ ತೀರ್ಪು ಪ್ರಕಟವಾದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಲೋಕಸಭೆಯ ಕಲಾಪಕ್ಕೆ ಹಾಜರಾಗಿದ್ದರು.

ಸದನದಲ್ಲಿ ಕಲಾಪ ಆರಂಭಕ್ಕೂ ಮುನ್ನ ರಾಹುಲ್ ಗಾಂಧಿ, ಪಕ್ಷದ ಸಂಸದರ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.

ವಿವಿಧ ವಿಷಯಗಳ ಗದ್ದಲದ ನಡುವೆ ಸದನವನ್ನು ಮುಂದೂಡಲಾಯಿತು.ಈ ವೇಳೆ ರಾಹುಲ್ ಗಾಂಧಿ ಸಂಸತ್ತನ್ನು ತೊರೆದರು.

‘ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡರೆ ಹೇಗೆ?’ ಎಂಬ ರಾಹುಲ್ ಗಾಂಧಿ ಹೇಳಿಕೆ ಸಂಬಂಧ ಅವರಿಗೆ ಸೂರತ್ ನ್ಯಾಯಾಲಯವು 2 ವರ್ಷ ಶಿಕ್ಷೆ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಅವರಿಗೆ ಮ್ಯಾಜಿಸ್ಟ್ರೇಟ್ ಎಚ್.ಎಚ್ ವರ್ಮಾ ಜಾಮೀನು ಮಂಜೂರು ಮಾಡಿದ್ದಾರೆ. ಶಿಕ್ಷೆ ಅಮಾನತುಗೊಳಿಸುವ ಪ್ರಕ್ರಿಯೆ ಸಂಬಂಧ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ.

ಮೇಲ್ಮನವಿ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದರೆ ಗಾಂಧಿ ಅವರು ಸಂಸತ್ತಿನ ಸದಸ್ಯತ್ವದಲ್ಲಿಯೇ ಮುಂದುವರೆಯಬಹುದು.

ಇವನ್ನೂ ಓದಿ; ವಿಧಾನಸಭೆ ಚುನಾವಣೆ: ಯಡಿಯೂರಪ್ಪ ನಿವಾಸಕ್ಕೆ ಅಮಿತ್ ಶಾ ಭೇಟಿ, ಉಪಾಹಾರ ಸೇವನೆ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 7,927 ಕ್ಕೆ ಏರಿಕೆ

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಿ ಸಚಿವಾಲಯ ಅಧಿಸೂಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.