ಶ್ರೀನಗರ: ತಾವು ಅಧಿಕಾರದಲ್ಲಿ ಉಳಿಯಲು ಹಿಂದೂಗಳಲ್ಲಿ ಭಯದ ಮನೋಭಾವನೆಯನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಶ್ರೀನಗರದ ಖನ್ಯಾರ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಸ್ಲಿಮರಿಗೆ ಹಣ ನೀಡುವ ಸಲುವಾಗಿ ಹಿಂದೂಗಳ ಮಂಗಳಸೂತ್ರವನ್ನು ಕಸಿದುಕೊಂಡು ಮಾರಲಾಗುತ್ತದೆ ಎಂದು ಹೇಳುವ ಮೂಲಕ ಹಿಂದೂಗಳಲ್ಲಿ ಭಯದ ಮನೋಭಾವನೆಯನ್ನು ಹುಟ್ಟುಹಾಕಲು ಪ್ರಧಾನಿ ಮೋದಿ ಪ್ರಯತ್ನಿಸುತ್ತಿದ್ದಾರೆ. ನಮ್ಮ ತಾಯಂದಿರು ಮತ್ತು ಸಹೋದರಿಯರಿಂದ ಮಂಗಳಸೂತ್ರವನ್ನು ಕಸಿದುಕೊಳ್ಳುವಷ್ಟು ನಾವು ಕೆಟ್ಟ ಜನರೇ’ ಎಂದು ಪ್ರಶ್ನಿಸಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಜನರ ಉಳಿತಾಯದ ಮೇಲೂ ತೆರಿಗೆ ವಿಧಿಸುತ್ತದೆ. ಜತೆಗೆ, ಜನರ ಬಳಿ ಎರಡು ಮನೆಗಳಿದ್ದರೆ, ಒಂದನ್ನು ಕಸಿದುಕೊಂಡು ಮುಸ್ಲಿಮರಿಗೆ ನೀಡುತ್ತದೆ ಎಂದು ಪ್ರಧಾನಿ ಮೋದಿ ಹಿಂದೂಗಳಿಗೆ ಹೇಳುತ್ತಿದ್ದಾರೆ. ಇಂತಹ ಒಡೆದು ಆಳುವ ರಾಜಕೀಯದಿಂದ ಜನರು ದೂರವಿರಬೇಕು ಎಂದು ಅಬ್ದುಲ್ಲಾ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಸುಳ್ಳು ಹೇಳುತ್ತಿದ್ದು, ಮುಸಲ್ಮಾನರ ಮೇಲೆ ಹಿಂದೂಗಳಲ್ಲಿ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆ. ನಾವು ಇದನ್ನು ವಿರೋಧಿಸುತ್ತೇವೆ ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೋದಿ ಅವರನ್ನು ಕೆಳಗಿಳಿಸಲು ದೇವರನ್ನು ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ.

2014ರಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಗೆ ಏರಿದಾಗ ಎಲ್‌ಪಿಜಿ ಸಿಲಿಂಡರ್ ದರ, ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ಕುರಿತು ಪ್ರಸ್ತಾಪಿಸುತ್ತಿದ್ದರು. ಆದರೆ, ಕಳೆದ ಹತ್ತು ವರ್ಷಗಳ ಅವರ ಆಡಳಿತಾವಧಿಯಲ್ಲಿ ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ತರಕಾರಿ ಸೇರಿದಂತೆ ಮುಂತಾದವುಗಳ ಬೆಲೆ ಏರಿಕೆಯಾಗಿದೆ. 2014ರಲ್ಲಿ ₹400 ಇದ್ದ ಅಡುಗೆ ಸಿಲಿಂಡರ್ ಬೆಲೆ ಈಗ ₹1,100 ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.