ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಗ್ಯಾರಂಟಿಗಳು ಸುಳ್ಳು: ಪ್ರಿಯಾಂಕಾ ಗಾಂಧಿ

Published 30 ಜನವರಿ 2024, 15:55 IST
Last Updated 30 ಜನವರಿ 2024, 15:55 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಜನರು ಇಸ್ರೇಲ್‌ನಲ್ಲಿ ಕೆಲಸ ಪಡೆಯಲು ಯತ್ನಿಸುತ್ತಿರುವ ವಿಚಾರ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ‘ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳು ಮತ್ತು ದೇಶವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ರೂಪಿಸುವ ಭರವಸೆಗಳೆಲ್ಲವೂ ಬರಿ ಸುಳ್ಳು’ ಎಂದು ಟೀಕಿಸಿದ್ದಾರೆ.

ದೇಶದಲ್ಲಿರುವ ನಿಜವಾದ ಸಮಸ್ಯೆಗಳಾದ ನಿರುದ್ಯೋಗ ಮತ್ತು ಹಣದುಬ್ಬರಗಳಿಗೆ ಬಿಜೆಪಿ ಸರ್ಕಾರದ ಬಳಿ ಪರಿಹಾರಗಳೇ ಇಲ್ಲ. ಈ ವಿಚಾರ ಇದೀಗ ದೇಶದ ನಾಗರಿಕರಿಗೆ ಅರ್ಥವಾಗಿದೆ’ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT