ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರುದ್ಯೋಗ ಖಾತರಿಯೇ ಮೋದಿ ಅವರ ಗ್ಯಾರಂಟಿ: ಪ್ರಿಯಾಂಕಾ ಗಾಂಧಿ

Published 4 ಫೆಬ್ರುವರಿ 2024, 11:05 IST
Last Updated 4 ಫೆಬ್ರುವರಿ 2024, 11:05 IST
ಅಕ್ಷರ ಗಾತ್ರ

ನವದೆಹಲಿ: ಖಾಲಿ ಇರುವ ಸರ್ಕಾರಿ ಹುದ್ದೆಗಳ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ನಿರುದ್ಯೋಗ ಖಾತರಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಸುಮಾರು 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.

‘ನಮ್ಮ ಕೋಟ್ಯಂತರ ಯುವಕರು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರವು ಅಪಪ್ರಚಾರ ಮಾಡಿದ್ದು ಬಿಟ್ಟರೆ, ಈ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಪ್ರಿಯಾಂಕಾ ಕಿಡಿಕಾರಿದ್ದಾರೆ.

8 ವರ್ಷಗಳಲ್ಲಿ 22 ಕೋಟಿ ಯುವಕರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, 7 ಲಕ್ಷ ಮಂದಿಗೆ ಮಾತ್ರ ಕೆಲಸ ಸಿಕ್ಕಿದೆ ಎಂದು 2022ರ ಜುಲೈ ತಿಂಗಳಲ್ಲಿ ಕೇಂದ್ರ ಸರ್ಕಾರವು ಸಂಸತ್ತಿಗೆ ತಿಳಿಸಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

‘ವಾರ್ಷಿಕವಾಗಿ ಎರಡು ಕೋಟಿ ಉದ್ಯೋಗ ನೀಡುವುದಾಗಿ ಬಿಜೆಪಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಖಾಲಿ ಇರುವ ಉದ್ಯೋಗಗಳನ್ನು ನೀಡಲು, ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ನೀಡುವುದಾಗಿ ಚುನಾವಣೆಯಲ್ಲಿ ಭರವಸೆ ನೀಡುತ್ತಾರೆ. ಆದರೆ, ವಾಸ್ತವದಲ್ಲಿ ನಿರುದ್ಯೋಗ ಖಾತರಿಯೇ ಪ್ರಧಾನಿ ಮೋದಿ ಅವರ ಗ್ಯಾರಂಟಿಯಾಗಿದೆ ಎಂದು ಪ್ರಿಯಾಂಕಾ ಟೀಕಿಸಿದ್ದಾರೆ.

ಹಣದುಬ್ಬರ ಮತ್ತು ನಿರುದ್ಯೋಗವನ್ನು ತಡೆಯುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ. ಅಲ್ಲದೆ, ಮಧ್ಯಂತರ ಬಜೆಟ್‌ ಸಮಾಜದ ಪ್ರತಿಯೊಂದು ವರ್ಗವನ್ನು ನಿರಾಶೆಗೊಳಿಸಿದೆ ಎಂದಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT