ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಜಾತಿಯವರು ಮಾತ್ರ ಏಕೆ ಆರ್‌ಎಸ್‌ಎಸ್ ಮುಖ್ಯಸ್ಥರಾಗಿರುತ್ತಾರೆ?: ಎಎಪಿ ಪ್ರಶ್ನೆ

ವಿವರಿಸುವಂತೆ ಮೋಹನ್ ಭಾಗವತ್‌ಗೆ ಸವಾಲು
Last Updated 8 ಅಕ್ಟೋಬರ್ 2022, 15:57 IST
ಅಕ್ಷರ ಗಾತ್ರ

ನವದೆಹಲಿ: ಆರ್‌ಎಸ್‌ಎಸ್‌ ಸಂಘಟನೆಯಲ್ಲಿ ಮೇಲ್ಜಾತಿಯವರು ಮಾತ್ರ ಏಕೆ ಮುಖ್ಯಸ್ಥರಾಗಿರುತ್ತಾರೆ ಎಂಬುದನ್ನು ಮುಖ್ಯಸ್ಥ ಮೋಹನ್ ಭಾಗವತ್ ವಿವರಿಸಬೇಕು ಎಂದು ಆಮ್‌ ಆದ್ಮಿ ಪಕ್ಷ(ಎಎಪಿ)ಮುಖಂಡ ದುರ್ಗೇಶ್ ಪಾಠಕ್ ಶನಿವಾರ ಒತ್ತಾಯಿಸಿದ್ದಾರೆ.

ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷವು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ‘ವರ್ಣ, ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಬಿಜೆಪಿಯು ದೇಶವನ್ನು ಭಾಗಗಳನ್ನಾಗಿ ಮಾಡಿದೆ’ ಎಂದೂ ಆರೋಪಿಸಿದೆ.

ನಾಗ್ಪುರದಲ್ಲಿ ಶುಕ್ರವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮೋಹನ್ ಭಾಗವತ್ ಅವರು, ‘ಜಾತಿ ವ್ಯವಸ್ಥೆಯು ಈಗ ಪ್ರಸ್ತುತವಾಗಿಲ್ಲ. ವರ್ಣ ಮತ್ತು ಜಾತಿಯಂಥ ಪರಿಕಲ್ಪನೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT