ಪುರಿಯಲ್ಲಿ ಶನಿವಾರ ಹಾಗೂ ಭಾನುವಾರ ಅಖಿಲ ಭಾರತ ಪ್ರಾಂತ ಸೇವಾ ಪ್ರಮುಖರ ಸಭೆ ನಿಗದಿಯಾಗಿದೆ. ಈ ಸಭೆಗೆ ಹಾಜರಾಗಲೆಂದು ಗುರುವಾರವೇ ಪುರಿಗೆ ಆಗಮಿಸಿರುವ ಭಾಗವತ್ ಅವರು, ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹಾಗೂ ಉಪ ಮುಖ್ಯಮಂತ್ರಿಗಳಾದ ಕೆ.ವಿ.ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಅವರೊಂದಿಗೂ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.