ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಒಡಿಶಾದ ಮೊದಲ BJP ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಚರಣ್ ಮಾಝಿ

Published 12 ಜೂನ್ 2024, 11:46 IST
Last Updated 12 ಜೂನ್ 2024, 11:46 IST
ಅಕ್ಷರ ಗಾತ್ರ

ಭುವನೇಶ್ವರ: ನಾಲ್ಕು ಬಾರಿ ಶಾಸಕ ಹಾಗೂ ಬುಡಕಟ್ಟು ನಾಯಕ ಮೋಹನ್ ಚರಣ್ ಮಾಝಿ ಅವರು ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಹಾಗೂ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಹಿರಿಯ ಬಿಜೆಪಿ ನಾಯಕ ಮತ್ತು ಪಟ್ನಾಗಢ ಶಾಸಕ ಕೆ.ವಿ.ಸಿಂಗ್ ಡಿಯೋ ಹಾಗೂ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ನಿಮಪಾರ ಕ್ಷೇತ್ರದ ಪ್ರವತಿ ಪರಿದಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಜನತಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ರಘುಬರ್ ದಾಸ್ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಕೇಂದ್ರ ಸಚಿವರಾದ ಅಮಿತ್ ಶಾ, ರಾಜ್‌ನಾಥ್ ಸಿಂಗ್, ಭೂಪೇಂದರ್ ಯಾದವ್, ಧರ್ಮೇಂದ್ರ ಪ್ರಧಾನ್, ಜುಯಲ್ ಓರಮ್, ಅಶ್ವಿನಿ ವೈಷ್ಣವ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಒಡಿಶಾದ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಉತ್ತರ ಪ್ರದೇಶ, ಗೋವಾ, ರಾಜಸ್ಥಾನ, ಮಧ್ಯಪ್ರದೇಶ, ಅಸ್ಸಾಂ, ಗುಜರಾತ್, ಛತ್ತೀಸಗಢ ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಒಡಿಶಾದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಸರ್ಕಾರ ರಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT