ಮುಂಬೈ:ದಕ್ಷಿಣ ಮುಂಬೈನ ಸರ್ವೋದಯ ನಗರದಲ್ಲಿ ಗುರುವಾರಸಣ್ಣ ವಿಮಾನ ಪತನ ವೇಳೆಸೆರೆಯಾದ ಸಿಸಿಟಿವಿ ದೃಶ್ಯವನ್ನು ಎಎನ್‍ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ಈ ಅವಘಡದಲ್ಲಿ 5 ಮಂದಿ ಸಾವಿಗೀಡಾಗಿದ್ದರು.

ವಿಮಾನ ಪತನವಾದ ಸ್ಥಳದ ಸಮೀಪವಿರುವ ಕಟ್ಟಡವೊಂದರಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿತ್ತು.

ಕಟ್ಟಡ ನಿರ್ಮಾಣಕ್ಕಾಗಿ ತಂದಿಟ್ಟಿದ್ದ ಕಬ್ಬಿಣದ ಸರಳುಗಳ ಮೇಲೆ ಬಿದ್ದ ವಿಮಾನ ಕ್ಷಣ ಮಾತ್ರದಲ್ಲಿ ಸುಟ್ಟು ಬೂದಿಯಾಗಿತ್ತು.

‘ಮುಂಬೈನ ಯು.ವೈ.ಏವಿಯೇಷನ್ ಎಂಬ ಖಾಸಗಿ ಸಂಸ್ಥೆಯ ಒಡೆತನದಲ್ಲಿ ಈ ವಿಮಾನ ಇತ್ತು. ವಿಮಾನವನ್ನು ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದಾಗ ಅಪಘಾತ ಸಂಭವಿಸಿದೆ’ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೇಳಿದೆ.
‘ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಕಾರಣ ವಿಮಾನದಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಇಬ್ಬರು ಎಂಜಿನಿಯರ್‌ಗಳು ಇದ್ದರು. ಆ ನಾಲ್ವರೂ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪತನದ ಸಂದರ್ಭದಲ್ಲಿ ರಸ್ತೆಯಲ್ಲಿದ್ದ ವ್ಯಕ್ತಿಯೊಬ್ಬರೂ ಮೃತಪಟ್ಟಿದ್ದಾರೆ’ ಎಂದು ಡಿಜಿಸಿಎ ಹೇಳಿದೆ.

‘ಪತನಕ್ಕೆ ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.ವಿಮಾನ ಅಪಘಾತ ತನಿಖಾ ಬ್ಯೂರೊ ಈ ಅವಘಡದ ತನಿಖೆ ನಡೆಸಲಿದೆ’ ಎಂದು ಡಿಜಿಸಿಎ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.