ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಇಬ್ಬರು ಸಹಚರರನ್ನು ಪಿಎಂಎಲ್ಎ ವಿಶೇಷ ನ್ಯಾಯಾಲಯವು ಇದೇ 20ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಾಲಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಅವರನ್ನು ಜಾರಿ ನಿರ್ದೇಶನಾಲಯವು ಜೂನ್ 26ರಂದು ಬಂಧಿಸಿತ್ತು. ಇವರಿಬ್ಬರ ವಿರುದ್ಧ ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಲಾಗಿದೆ.

ಈ ಇಬ್ಬರು ಆರೋಪಿಗಳನ್ನು ನ್ಯಾಯಾಧೀಶ ಎಸ್.ಎಂ. ಬೊಸ್ಲೆ ಅವರ ಮುಂದೆ ಮಂಗಳವಾರ ಹಾಜರುಪಡಿಸಲಾಗಿತ್ತು. ಆರೋಪಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇ.ಡಿ ನ್ಯಾಯಾಲಕ್ಕೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು ಜು.20ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.