ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ED Raid: ಸೊರೇನ್ ದೆಹಲಿ ನಿವಾಸದಿಂದ 36 ಲಕ್ಷ, ಎಸ್‌ಯುವಿ ಕಾರು ವಶಕ್ಕೆ

Published 30 ಜನವರಿ 2024, 6:52 IST
Last Updated 30 ಜನವರಿ 2024, 6:52 IST
ಅಕ್ಷರ ಗಾತ್ರ

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಸೋಮವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ), 36 ಲಕ್ಷ ರೂಪಾಯಿ ನಗದು, ಒಂದು ಎಸ್‌ಯುವಿ ಕಾರು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಮೀನು ಅಕ್ರಮದ ಹಗರಣವೊಂದಕ್ಕೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು, ಸೊರೇನ್ ಅವರ ದೆಹಲಿ ನಿವಾಸಕ್ಕೆ ಸೋಮವಾರ ದಾಳಿ ನಡೆಸಿದ್ದರು. ಸುಮಾರು 13 ತಾಸುಗಳವರೆಗೆ ಇ.ಡಿ ಅಧಿಕಾರಿಗಳು ಸೊರೇನ್ ಹೇಳಿಕೆ ದಾಖಲಿಸಲು ಕಾದು ಕುಳಿತಿದ್ದರು.

ಏತನ್ಮಧ್ಯೆ ಇ.ಡಿಗೆ ಕಳುಹಿಸಿದ ಇ-ಮೇಲ್‌ನಲ್ಲಿ ಜನವರಿ 31ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಹೇಳಿಕೆ ನೀಡಲು ಸೊರೇನ್ ಸಮ್ಮತಿ ಸೂಚಿಸಿದ್ದಾರೆ.

ಈ ಎಲ್ಲ ರಾಜಕೀಯ ಬೆಳವಣಿಗೆಗಳ ಬಗ್ಗೆ ಇಂದು ಚರ್ಚೆ ನಡೆಸಲು ಆಡಳಿತಾರೂಢ ಜಾರ್ಖಂಡ್‌ ಮುಕ್ತಿ ಮೋರ್ಚಾದ (ಜೆಎಂಎಂ) ನೇತೃತ್ವದ ಮೈತ್ರಿ ಸರ್ಕಾರದ ಎಲ್ಲ ಶಾಸಕರು ರಾಂಚಿಯಲ್ಲೇ ಇರುವಂತೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT