ನವದೆಹಲಿ: ಪ್ರಸ್ತುತ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ 1,700ಕ್ಕೂ ಹೆಚ್ಚು ಹಣ ಅಕ್ರಮ ವರ್ಗಾವಣೆ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ ಎಂದು ಇ.ಡಿ ನಿರ್ದೇಶಕ ರಾಹುಲ್ ನವೀನ್ ಇಂದು (ಗುರುವಾರ) ತಿಳಿಸಿದ್ದಾರೆ.

ದೇಶದ ನ್ಯಾಯ ವ್ಯವಸ್ಥೆ ಪ್ರಕ್ರಿಯೆಯಲ್ಲಿನ ಸಹಜ ವಿಳಂಬವು ಇದಕ್ಕೆ ಕಾರಣವಾಗಿರಬಹುದು ಎಂದು ಅವರು ತಿಳಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಒಟ್ಟು 1,739 ಪ್ರಕರಣಗಳು ವಿಚಾರಣೆಯಲ್ಲಿವೆ. ಬಾಕಿ ಇರುವ ಪ್ರಕರಣಗಳಲ್ಲಿ ನ್ಯಾಯಾಲಗಳ ಮುಂದೆ ಆರೋಪಪಟ್ಟಿಗಳನ್ನು ಸಲ್ಲಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇ.ಡಿ ತನಿಖೆಗೆ ಸುಧಾರಿತ ತಂತ್ರಜ್ಞಾನ ಹಾಗೂ ವಿಧಿವಿಜ್ಞಾನವನ್ನು ಬಳಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇ.ಡಿ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಶೇ 93.6ರಷ್ಟಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

1956ರ ಮೇ 1ರಂದು ಇ.ಡಿ ತನಿಖೆ ಸಂಸ್ಥೆ ಅಸ್ತಿತ್ವಕ್ಕೆ ಬಂದಿತ್ತು. ಈಗ 69 ವರ್ಷಗಳನ್ನು ಪೂರೈಸಿದೆ.
.ಚಿನ್ನಾಭರಣ ವಂಚನೆ ಪ್ರಕರಣ | ಪ್ರಭಾವಿಗಳ ಜತೆ ಐಶ್ವರ್ಯ ಗೌಡ ವ್ಯವಹಾರ: ಇ.ಡಿ.₹9.82 ಕೋಟಿ ಚಿನ್ನಾಭರಣ ವಂಚನೆ: ಶಾಸಕ ವಿನಯ್ ಕುಲಕರ್ಣಿ ಮನೆಯಲ್ಲಿ ಇ.ಡಿ ತಪಾಸಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.