ನವದೆಹಲಿ: ವಾಡಿಕೆಗಿಂತ ಆರು ದಿನಗಳ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ವ್ಯಾಪಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.

ಮಂಗಳವಾರ ಕೊನೆಯದಾಗಿ ರಾಜಸ್ಥಾನ, ಹರಿಯಾಣ, ಪಂಜಾಬ್ ರಾಜ್ಯಗಳನ್ನು ಪ್ರವೇಶ ಮಾಡಿದೆ. ಈ ಮೂಲಕ ಜುಲೈ 2ರಂದು ಮುಂಗಾರು ಇಡೀ ದೇಶವನ್ನು ಆವರಿಸಿದಂತಾಗಿದೆ. ಸಾಮಾನ್ಯವಾಗಿ ಜುಲೈ 8ರಂದು ಮುಂಗಾರು ದೇಶವನ್ನು ವ್ಯಾಪಿಸುತ್ತಿತ್ತು ಎಂದು ಇಲಾಖೆ ಹೇಳಿದೆ.

ಮೇ 30ರಂದು ಮುಂಗಾರು ಕೇರಳವನ್ನು ಪ್ರವೇಶಿಸಿತ್ತು. ಮಹಾರಾಷ್ಟ್ರದವರೆಗೆ ತಲುಪಿದ ಬಳಿಕ ವೇಗ ಕಳೆದುಕೊಂಡಿತ್ತು. ಪರಿಣಾಮ ವಾಯವ್ಯ ಭಾರತದಲ್ಲಿ ತಾಪಮಾನ ಏರಿಕೆಯಾಗಿತ್ತು. ಕ್ರಮೇಣ ವೇಗ ಪಡೆದ ಮುಂಗಾರು ವಾಡಿಕೆಗಿಂತ ಆರು ದಿನಗಳ ಮೊದಲೇ ದೇಶವನ್ನು ವ್ಯಾಪಿಸಿದೆ.

ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದು, ಭಾರಿ ಮಳೆಯಿಂದಾಗಿ ಪಶ್ಚಿಮ ಹಿಮಾಲಯದ ರಾಜ್ಯಗಳ ಮತ್ತು ದೇಶದ ಮಧ್ಯ ಭಾಗಗಳಲ್ಲಿರುವ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ಪ್ರವಾಹಕ್ಕೆ ಕಾರಣವಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
.ದೇಶದಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ ಸಾಧ್ಯತೆ.ಮಂಡ್ಯ: ಮುಂಗಾರು ಮಳೆಯ ಸಿಂಚನಕ್ಕೆ ಗರಿಗೆದರಿದ ಕೃಷಿ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.