ನವದೆಹಲಿ: ಈ ಬಾರಿ ನೈರುತ್ಯ ಮುಂಗಾರು ಮೇ 27ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ.

ಇದು ಖಾರಿಫ್ ಬಿತ್ತನೆ ಋತುವಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ನಿರೀಕ್ಷಿಸಲಾಗಿದೆ.

2025ರ ಮುಂಗಾರು ಋತುವಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿಯಲಿದೆ ಎಂದು ಏಪ್ರಿಲ್ನಲ್ಲಿ ಮುನ್ಸೂಚನೆ ನೀಡಿದ್ದ ಐಎಂಡಿ, ಎಲ್ ನಿನೊ ಸಾಧ್ಯತೆಯನ್ನು ತಳ್ಳಿಹಾಕಿತ್ತು.

‘ನಾಲ್ಕು ತಿಂಗಳ ಮುಂಗಾರು ಋತುವಿನಲ್ಲಿ (ಜೂನ್ನಿಂದ ಸೆಪ್ಟೆಂಬರ್) ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಶೇ 105ರಷ್ಟು ಮಳೆಯಾಗಲಿದ್ದು, ಸರಾಸರಿ 87 ಸೆಂ.ಮೀ. ವರ್ಷಧಾರೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ’ ಎಂದು ಭೂವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರವಿಚಂದ್ರನ್ ಹೇಳಿದ್ದಾರೆ.

ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಒಡಿಶಾ, ಛತ್ತೀಸಗಢ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದರೆ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ತಮಿಳುನಾಡು, ಬಿಹಾರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.