ದೇಶದ ದಕ್ಷಿಣ ಭಾಗ, ಕೇಂದ್ರ, ಪೂರ್ವ ಹಾಗೂ ಈಶಾನ್ಯ ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. ದೇಶದ ವಾಯವ್ಯ ಭಾಗದಲ್ಲಿ ವಾಡಿಕೆಗಿಂತ ಶೇ 19ರಷ್ಟು ಮಳೆ ಬಿದ್ದಿದೆ. ಜಮ್ಮು–ಕಾಶ್ಮೀರ, ಲಡಾಖ್, ಉತ್ತರಾಖಂಡ್, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ದೆಹಲಿ ಹಾಗೂ ರಾಜಸ್ಥಾನದಲ್ಲಿ ಈ ಕೊರತೆ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.