ಮೂಡಿಗೆರೆ: ‘ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರ ಜನಪರ ಆಡಳಿತದಿಂದಾಗಿ ಅಸ್ಸಾಂ, ಪುದುಚೇರಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಜನರು ಅಭೂತಪೂರ್ವವಾಗಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ’ ಎಂದು ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು.

ಪಟ್ಟಣದ ಲಯನ್ಸ್ ವೃತ್ತದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ಪಕ್ಷವನ್ನು ಬಿಜೆಪಿ ಸಂಪೂರ್ಣ ನೆಲಕಚ್ಚುವಂತೆ ಮಾಡಿದೆ. ಪುದುಚೇರಿ, ಅಸ್ಸಾಂನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಅಲ್ಲದೆ, ತಮಿಳುನಾಡಿನಲ್ಲೂ ಮಿತ್ರ ಪಕ್ಷ ಉತ್ತಮ ಸಾಧನೆ ಮಾಡಿದ್ದು, ಇದು ಮುಂದಿನ ಚುನಾವಣೆಗೆ ಬಿಜೆಪಿ ನೆಲೆಯೂರುವ ಸೂಚನೆಯಾಗಿದೆ. ಈ ಗೆಲುವಿನ ಗಾಳಿಯು ಮುಂದೆ ರಾಜ್ಯಕ್ಕೂ ಬೀಸಲಿದೆ’ ಎಂದರು.

ಶೃಂಗೇರಿ ಕ್ಷೇತ್ರದಲ್ಲಿ ಅಂಚೆ ಮತಗಳ ಮೂಲಕ ಡಿ.ಎನ್. ಜೀವರಾಜ್ ಅವರನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ, ನ್ಯಾಯಾಲಯ ಮರು ಎಣಿಕೆಗಾಗಿ ಆದೇಶಿಸಿದ್ದರಿಂದ ಸತ್ಯಾಂಶ ಹೊರ ಬಂದಿದ್ದು, ಡಿ.ಎನ್. ಜೀವರಾಜ್ ಶಾಸಕರಾಗಲು ಸಾಧ್ಯವಾಗಿದೆ. ಇಂಥ ಅಂಚೆ ಮತಗಳನ್ನು ಮುಚ್ಚಿಟ್ಟು ಗೊಂದಲ ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ಮುಖಂಡರಾದ ಎಂ.ಆರ್.ಜಗದೀಶ್, ದೀಪಕ್ ದೊಡ್ಡಯ್ಯ ಮಾತನಾಡಿದರು. ಜೆ.ಎಸ್. ರಘು, ಮನೋಜ್ ಹಳೆಕೋಟೆ, ಭರತ್ ಬಾಳೂರು, ವಕೀಲ ಸಿದ್ದಯ್ಯ, ಪರೀಕ್ಷಿತ್ ಜಾವಳಿ, ವಿಕ್ರಮ್ ಬಣಕಲ್, ಪ್ರಮೋದ್ ದುಂಡುಗ, ಪಂಚಾಕ್ಷರಿ, ಸಂದೀಪ್, ಧನಿಕ್ ಕೊಡದಿಣ್ಣೆ, ನಯನ ತಳವಾರ, ಸಚಿನ್ ಬಾನಳ್ಳಿ, ಸುನಿಲ್ ಮಣ್ಣೀಕೆರೆ, ಲೋಕೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-126-226352839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.