ನವದೆಹಲಿ: ದೇಶದಾದ್ಯಂತ ದಾಖಲೆಗಳ ಪ್ರಕಾರ ಒಟ್ಟಾರೆ 14.6 ಕೋಟಿ ಮಹಿಳೆಯರು ಸ್ತನ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದಾರೆ ಎಂದು ಶುಕ್ರವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಲೋಕಸಭೆಗೆ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಸದಸ್ಯರು ಕೇಳಲಾದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ್ದಾರೆ.

ಒಟ್ಟು 57,184 ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪತ್ತೆಯಾಗಿದ್ದು ಅದರಲ್ಲಿ 50,612 ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಒಂಬತ್ತು ಕೋಟಿಗೂ ಅಧಿಕ ಮಹಿಳೆಯರು ಗರ್ಭಕಂಠ ಕ್ಯಾನ್ಸರ್ (cervical cancer) ತಪಾಸಣೆಗೆ ಒಳಗಾಗಿದ್ದಾರೆ. ಅದರಲ್ಲಿ 96,747 ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. 86,196 ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎನ್ಸಿಡಿ ಡೇಟಾ ಪೋರ್ಟಲ್ ಮಾಹಿತಿ ಉಲ್ಲೇಖಿಸಿ ಉತ್ತರ ಒದಗಿಸಿದ್ದಾರೆ.

ಸಾಂಕ್ರಾಮಿಕವಲ್ಲದ ರೋಗಗಳ ಮೇಲೆ ನಿಗಾ ವಹಿಸಿ, ನಿಯಂತ್ರಿಸಲು ಕೇಂದ್ರ ಸರ್ಕಾರ 2018 ರಲ್ಲಿ ಎನ್ಸಿಡಿ ಪೋರ್ಟಲ್ ಸ್ಥಾಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.