ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಜೈಲುಗಳಿಂದ 2.5 ತಿಂಗಳಲ್ಲಿ 348 ಮೊಬೈಲ್ ಫೋನ್ ವಶಕ್ಕೆ

Last Updated 2 ಫೆಬ್ರುವರಿ 2023, 13:46 IST
ಅಕ್ಷರ ಗಾತ್ರ

ನವದೆಹಲಿ: ರಾಜಧಾನಿಯ ಜೈಲುಗಳಿಂದ ಕಳೆದ ಎರಡೂವರೆ ತಿಂಗಳಲ್ಲಿ 348 ಮೊಬೈಲ್ ಪೋನ್‌ಗಳನ್ನು ದೆಹಲಿಯ ಕಾರಾಗೃಹ ಇಲಾಖೆಯು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಕಾರಾಗೃಹ ಇಲಾಖೆ ಪೊಲೀಸ್ ನಿರ್ದೇಶಕ ಸಂಜಯ್ ಬನಿವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಬುಧವಾರ ನಡೆಸಿದ ದಾಳಿಯಲ್ಲಿ ಜೈಲುಗಳಿಂದ 18 ಫೋನ್ ಹಾಗೂ ಚಾರ್ಜರ್ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಜೈಲಿನ ಒಳಗೆ ಗುಪ್ತಚರ ಜಾರಿಯ ನಂತರ ನಿರಂತರ ದಾಳಿ ನಡೆಸಲಾಗುತ್ತಿದೆ. ಈ ಮೂಲಕ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT