ನವದೆಹಲಿ: ಕೊರೊನಾದ ರೂಪಾಂತರಿ ‘ಡೆಲ್ಟಾ ಪ್ಲಸ್’ ತಳಿಯ 40 ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಬಹುತೇಕ ಪ್ರಕರಣಗಳು ಮಹಾರಾಷ್ಟ್ರ, ಕೇರಳ ಹಾಗೂ ಮಧ್ಯಪ್ರದೇಶದಲ್ಲೇ ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ದೇಶದ ವಿವಿಧ ಭಾಗಗಳಿಂದ ಸಂಗ್ರಹಿಸಿದ 45,000ಕ್ಕೂ ಹೆಚ್ಚು ಮಾದರಿಗಳಲ್ಲಿ, ಡೆಲ್ಟಾ ಪ್ಲಸ್‌ನ 40 ಪ್ರಕರಣಗಳು ಮಾತ್ರ ಕಂಡುಬಂದಿದ್ದು ಭಾರಿ ಪ್ರಮಾಣದಲ್ಲಿ ಅದರ ಪ್ರಸರಣ ಕಾಣಲಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕಟ್ಟೆಚ್ಚರ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಸೋಂಕು ಪತ್ತೆಯಾದ ನಂತರ ಗೋವಾ ರಾಜ್ಯವು ಗಡಿಯಲ್ಲಿ ಕಟ್ಟೆಚ್ಚರ ವಹಿಸಿದೆ.

ಗಡಿಭಾಗದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ. ಗಡಿಯಲ್ಲಿ ಅಗತ್ಯ ತಪಾಸಣಾ ವ್ಯವಸ್ಥೆಯನ್ನು ಮಾಡಿಕೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.