ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಜರಾತ್‌ನಲ್ಲಿ 87 ಸಾವಿರ ಕೆ.ಜಿ. ಮಾದಕ ವಸ್ತು ವಶ: ಸಚಿವ ಸಂಘವಿ

Published 24 ಜೂನ್ 2024, 16:20 IST
Last Updated 24 ಜೂನ್ 2024, 16:20 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್‌ನಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ₹9,679 ಕೋಟಿ ಮೌಲ್ಯದ ಒಟ್ಟು 87,605 ಕೆ.ಜಿ.ಗಿಂತ ಹೆಚ್ಚಿನ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ, 2,607 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ತಿಳಿಸಿದ್ದಾರೆ.

ಮಾದಕ ವಸ್ತುಗಳ ವಿರೋಧಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ವರ್ಷದಲ್ಲೇ 251 ಪ್ರಕರಣಗಳನ್ನು ದಾಖಲಿಸಲಾಗಿದೆ, 353 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ‘ಮಾದಕ ವಸ್ತುಗಳ ವಿರುದ್ಧ ನಾವು ಸಮರ ಸಾರಿದ್ದೇವೆ. ಸಮರವನ್ನು ನಗರಗಳಿಂದ ಹಳ್ಳಿಗಳವರೆಗೆ ಒಯ್ಯಲು ಅಭಿಯಾನ ಆರಂಭಿಸುತ್ತಿದ್ದೇವೆ. ಇದರ ಭಾಗವಾಗಿ, ಅಭಿಯಾನದ ಅನುಷ್ಠಾನಕ್ಕೆ ಎಡಿಜಿಪಿ ಶ್ರೇಣಿಯ ಪೊಲೀಸ್ ಅಧಿಕಾರಿಗಳು ಬೇರೆ ಬೇರೆ ಜಿಲ್ಲೆಗಳನ್ನು ದತ್ತು ಪಡೆಯಲಿದ್ದಾರೆ’ ಎಂದಿದ್ದಾರೆ.

ಅಧಿಕಾರಿಗಳು ಪ್ರತಿ ತಿಂಗಳು ಕೆಲವು ದಿನಗಳ ಮಟ್ಟಿಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಅರಿವು ಮೂಡಿಸಲು ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಗುಜರಾತ್‌ ರಾಜ್ಯವು ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಮೊದಲ ಸ್ಥಾನದಲ್ಲಿ ಇದೆಯೇ ವಿನಾ ಮಾದಕ ವಸ್ತುಗಳ ಸೇವನೆಯಲ್ಲಿ ಅಲ್ಲ ಎಂದು ಸಂಘವಿ ಹೇಳಿದ್ದಾರೆ. ಆದರೆ ರಾಜಕೀಯ ಲಾಭಕ್ಕಾಗಿ ಗುಜರಾತ್‌ ರಾಜ್ಯವನ್ನು ಅವಹೇಳನ ಮಾಡುವುದು ಈಗ ಒಂದು ಫ್ಯಾಷನ್ ಆಗಿಬಿಟ್ಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT