ವಡೋದರಾ: ವಡೋದರಾ ರೈಲು ನಿಲ್ದಾಣದಿಂದ ಮುಂಬೈಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,283 ಕೆ.ಜಿ ಗೋಮಾಂಸವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಡೋದರಾ ಎಕ್ಸ್ಪ್ರೆಸ್ ರೈಲಿನಲ್ಲಿ ಪಂಜಾಬ್ನ ಅಮೃತಸರದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1,283 ಕೆ.ಜಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಡೋದರಾದ ಪಶ್ಚಿಮ ರೈಲ್ವೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸರೋಜ್ ಕುಮಾರಿ ತಿಳಿಸಿದ್ದಾರೆ.

ಗೋಮಾಂಸ ಇದ್ದ ಪಾರ್ಸೆಲ್ಗಳನ್ನು ಕಳುಹಿಸಿದ ಮತ್ತು ಸ್ವೀಕರಿಸಿದ ವಿಜಯ್ ಸಿಂಗ್ ಮತ್ತು ಜಾಫರ್ ಶಬೀರ್ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳು ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 325 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರೈಲಿನಲ್ಲಿ ನಿಷೇಧಿತ ಮಾಂಸ ಸಾಗಣೆ ಸಂಬಂಧ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ವಶಪಡಿಸಿಕೊಂಡ ಮಾಂಸದ ಮಾದರಿಗಳನ್ನು ಸೂರತ್ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದು ಗೋಮಾಂಸ ಎಂದು ದೃಢಪಟ್ಟಿದೆ ವಡೋದರಾ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.