ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಬದುಕಬೇಕೆಂದರೆ ‘ಭಾರತ್ ಮಾತಾ ಕಿ ಜೈ’ ಎಂದು ಹೇಳಬೇಕು: ಕೇಂದ್ರ ಸಚಿವ

Published 15 ಅಕ್ಟೋಬರ್ 2023, 4:57 IST
Last Updated 15 ಅಕ್ಟೋಬರ್ 2023, 4:57 IST
ಅಕ್ಷರ ಗಾತ್ರ

ಹೈದರಾಬಾದ್‌: ಭಾರತದಲ್ಲಿ ಇರಬೇಕೆಂದರೆ ‘ಭಾರತ್‌ ಮಾತಾ ಕಿ ಜೈ’ ಎನ್ನಲೇಬೇಕು ಎಂದು ಕೇಂದ್ರ ಸಚಿವ ಕೈಲಾಶ್‌ ಚೌದರಿ ಹೇಳಿದ್ದಾರೆ.

ಬಿಜೆಪಿ ಆಯೋಜಿಸಿದ್ದ  ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹೈದರಾಬಾದಿನಲ್ಲಿ ಸಾರ್ವಜನಿಕ ಪ್ರತಿನಿಧಿಗಳೊಬ್ಬರ ಹೇಳಿಕೆ ಬಗ್ಗೆ ಪ್ರಸ್ತಾಪಿಸಿ, ಭಾರತ ಮಾತಾ ಕಿ ಜೈ ಎನ್ನದವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು. ರಾಜ್ಯದಲ್ಲಿ ರಾಷ್ಟ್ರೀಯ ಚಿಂತನೆಯ ಸರ್ಕಾರ ರಚನೆಯಾಗಬೇಕು ಎಂದರು.

ಭಾರತದಲ್ಲಿ ಇದ್ದುಕೊಂಡು ಯಾರು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುವುದಿಲ್ಲವೋ ಅಂಥವರು ಪಾಕಿಸ್ತಾನಕ್ಕೆ ಹೋಗಬಹುದು, ಇಲ್ಲಿರುವ ಅಗತ್ಯವಿಲ್ಲ. ‘ವಂದೇ ಮಾತರಂ’ ಮತ್ತು ‘ಭಾರತ್ ಮಾತಾ ಕಿ ಜೈ’ ಎಂದು ಹೇಳುವವರಿಗೆ ಮಾತ್ರ ದೇಶದಲ್ಲಿ ಸ್ಥಾನವಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT