ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಕೊಳವೆಬಾವಿಯಲ್ಲಿ ಬಿದ್ದಿದ್ದ ಬಾಲಕ ಸಾವು

Published 14 ಏಪ್ರಿಲ್ 2024, 12:57 IST
Last Updated 14 ಏಪ್ರಿಲ್ 2024, 12:57 IST
ಅಕ್ಷರ ಗಾತ್ರ

ರೇವಾ(ಮಧ್ಯಪ್ರದೇಶ): ಜಿಲ್ಲೆಯ ಮಣಿಕಾ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ತೆರೆದ ಕೊಳವೆಬಾವಿಯಲ್ಲಿ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಬಾಲಕ ಶುಕ್ರವಾರ ಆಟವಾಡುತ್ತಿದ್ದ ವೇಳೆ, ಮಧ್ಯಾಹ್ನ 3ರ ಸುಮಾರಿಗೆ ಕೊಳವೆ ಬಾವಿಯೊಳಗೆ ಬಿದ್ದಿದ್ದ. 40 ಅಡಿ ಆಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಾಲಕನ ರಕ್ಷಣೆಗೆ ವಿವಿಧ ಸಂಸ್ಥೆಗಳು ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿ ಬಾಲಕನ್ನು ತಲುಪಿದ್ದರು. ಆ ಹೊತ್ತಿಗೆ, ಬಾಲಕ ಯಾವುದೇ ಪ್ರತಿಕ್ರಿಯೆ ತೋರಲಿಲ್ಲ. ಕೊಳವೆಬಾವಿ ಬಹಳ ಕಿರಿದಾಗಿದ್ದ ಕಾರಣ ಬಾಲಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ’ ಎಂದು ಜಿಲ್ಲಾಧಿಕಾರಿ ಪ್ರತಿಭಾ ಪಾಲ್‌ ಹೇಳಿದ್ದಾರೆ.

ಸ್ಥಳೀಯ ಆಡಳಿತದ ಜೊತೆಗೆ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ್ದರು. 70 ಅಡಿ ಆಳದವರೆಗೆ ಆಮ್ಲಜನಕ ಪೂರೈಕೆಗೆ ವ್ಯವಸ್ಥೆ ಮಾಡಲಾಗಿತ್ತು. ಕೊಳವೆಬಾವಿಗೆ ಸಮಾನಾಂತರವಾಗಿ ಅಗೆಯುವ ಮೂಲಕ ಬಾಲಕನ ರಕ್ಷಣೆಗೆ ಪ್ರಯತ್ನಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT