ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಅವರು ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ, ಇದು ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಗುಡುಗಿದೆ.
ಈ ಕುರಿತು ಎಐಸಿಸಿ ಸದಸ್ಯ ನಿರಂಜನ್ ಅವರು ಎರಡೂ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಲಗತ್ತಿಸಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಓವೈಸಿ ಅವರು ರಾಜೇಂದ್ರ ನಗರ ಮತ್ತು ಖೈರತಾಬಾದ್ ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ.
ಪರಿಷ್ಕೃತ ಮತದಾರರ ಪಟ್ಟಿಯನ್ನು ಪ್ರಕಟಿಸುವಲ್ಲಿ ಚುನಾವಣಾ ಆಯೋಗ ನಿರ್ಲಕ್ಷ್ಯ ವಹಿಸಿದೆ ಎಂದು ನಿರಂಜನ್ ಆರೋಪಿಸಿದ್ದಾರೆ.