ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯರ ಜೊತೆ ಬಿಜೆಪಿ ನಾಯಕನ ಅನುಚಿತ ವರ್ತನೆ: ವಿಡಿಯೊ ಟ್ವೀಟ್‌ ಮಾಡಿ ಕಾಂಗ್ರೆಸ್ ಕಿಡಿ

ಮಧ್ಯಪ್ರದೇಶದಲ್ಲಿ ನಡೆದ ಘಟನೆ– ವಿವಾದ
Published 23 ಜೂನ್ 2023, 13:12 IST
Last Updated 23 ಜೂನ್ 2023, 13:12 IST
ಅಕ್ಷರ ಗಾತ್ರ

ಭೋಪಾಲ್: ಕಾರ್ಯಕ್ರಮವೊಂದರಲ್ಲಿ ಮಧ್ಯಪ್ರದೇಶದ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಗೌರಿಶಂಕರ್ ಬಿಸೆನ್ ಅವರು ಅಪ್ರಾಪ್ತ ವಯಸ್ಸಿನ ಬಾಲಕಿಯರಿಬ್ಬರನ್ನು ಅನುಚಿತವಾಗಿ ಸ್ಪರ್ಶಿಸಿದ ವಿಡಿಯೊವನ್ನು ವಿರೋಧಪಕ್ಷ ಕಾಂಗ್ರೆಸ್ ಟ್ವೀಟ್ ಮಾಡಿರುವುದು, ಆಡಳಿತಾರೂಢ ಬಿಜೆಪಿ– ಕಾಂಗ್ರೆಸ್ ನಡುವೆ ವಿವಾದಕ್ಕೆ ಕಾರಣವಾಗಿದೆ.

ಬಾಲಕಿಯರ ಜತೆಗಿನ ಗೌರಿಶಂಕರ್ ಬಿಸೆನ್ ಅವರ ವಿಡಿಯೊವನ್ನು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದ ಮಧ್ಯಪ್ರದೇಶ ಕಾಂಗ್ರೆಸ್, ‘ಹಾಲಿ ಶಾಸಕ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಬಿಸಿನ್ ಅವರ ನಡೆಯು ನಾಚಿಕೆಗೇಡಿನ ಸಂಗತಿ’ ಎಂದೂ ಹೇಳಿತ್ತು. 

ಬಾಲಾಘಾಟ್ ಜಿಲ್ಲೆಯೊಂದರಲ್ಲಿ ನಡೆದ ಕಾರ್ಯಕ್ರದಲ್ಲಿ ಗೌರಿಶಂಕರ್ ಅವರು ಬಾಲಕಿಯರಿಬ್ಬರ ಜತೆಗೆ ಅನುಚಿತವಾಗಿ ನಡೆದುಕೊಂಡಿದ್ದರು. 

ಕಾಂಗ್ರೆಸ್ ಆರೋಪವನ್ನು ಬಲವಾಗಿ ತಳ್ಳಿಹಾಕಿರುವ ಬಿಜೆಪಿ, ಬಾಲಕಿಯರನ್ನು ಒಳಗೊಂಡ ವಿಡಿಯೋವನ್ನು ಟ್ವೀಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಟೀಕಿಸಿದ್ದು, ಅದರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿಯೂ ಎಚ್ಚರಿಕೆ ನೀಡಿದೆ.

‘ಇಬ್ಬರು ಬಾಲಕಿಯರು ಗೌರಿಶಂಕರ್ ಅವರ ಮೊಮ್ಮಕ್ಕಳ ವಯಸ್ಸಿನವರು. ಬಿಸೆನ್ ಅವರನ್ನು ಸಾರ್ವಜನಿಕವಾಗಿ ಪ್ರೀತಿಯಿಂದ ಭೇಟಿಯಾಗುತ್ತಿದ್ದಾರೆ’ ಎಂದು ರಾಜ್ಯ ಬಿಜೆಪಿ ವಕ್ತಾರ ನರೇಂದ್ರ ಸಿಂಗ್ ಸಲೂಜಾ ಹೇಳಿದ್ದಾರೆ.

ಮಧ್ಯಪ್ರದೇಶದ ಗೃಹಸಚಿವ ಹಾಗೂ ಸರ್ಕಾರದ ವಕ್ತಾರ ನರೋತ್ತಮ್ ಮಿಶ್ರಾ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಇದು ಕಾಂಗ್ರೆಸ್‌ನ ಹೀನಾಯ ಮನಃಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ.

‘ಇದು  ಕಾಂಗ್ರೆಸ್‌ನ ಹೇಯ ಮನಃಸ್ಥಿತಿಯನ್ನು ಬಿಂಬಿಸುತ್ತದೆ. ಕೊಳಕು ರಾಜಕೀಯದ ಕಾರಣದಿಂದ, ಬಾಲಕಿಯರ ಮೇಲಿನ ಬಿಸೆನ್ ಅವರ ವಾತ್ಸಲ್ಯವನ್ನು ಪ್ರತಿಬಿಂಬಿಸುವ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ವಿಡಿಯೊವನ್ನು ಕಾಂಗ್ರೆಸ್ ತೋರಿಸಿದ ರೀತಿಯು ನಾಚಿಕೆಗೇಡಿನ ಸಂಗತಿ. ಘಟನೆ ಕುರಿತು ನಾವು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸುತ್ತಿದ್ದೇವೆ. ವಿಶೇಷವಾಗಿ ಹೆಣ್ಣುಮಕ್ಕಳ ಗುರುತು ಬಹಿರಂಗಪಡಿಸದಂತೆ ಎಚ್ಚರಿಕೆ ವಹಿಸುತ್ತಿದ್ದೇವೆ’ ಎಂದೂ ಮಿಶ್ರಾ ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT