ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಭೇಟಿ ಮಾಡಲಿರುವ ಕಮಲನಾಥ್: ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ?

Published 5 ಡಿಸೆಂಬರ್ 2023, 2:40 IST
Last Updated 5 ಡಿಸೆಂಬರ್ 2023, 2:40 IST
ಅಕ್ಷರ ಗಾತ್ರ

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲನಾಥ್ ಇಂದು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಭಾನುವಾರ ಹೊರಬಿದ್ದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 230 ಕ್ಷೇತ್ರಗಳ ಪೈಕಿ ಬಿಜೆಪಿ 163 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಉಳಿಸಿಕೊಂಡಿತ್ತು. 66 ಸ್ಥಾನಗಳನ್ನು ಮಾತ್ರ ಗಳಿಸಿದ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿತು.

ಇಂಡಿಯಾ ಬಣದ ನಾಯಕರಾದ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರ ಬಗ್ಗೆ ಸೀಟು ಹಂಚಿಕೆ ವಿಚಾರದಲ್ಲಿ ಕಮಲನಾಥ್ ಹೇಳಿಕೆ ಕುರಿತಂತೆ ಹೈಕಮಾಂಡ್ ಸಹ ಅಸಮಾಧಾನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಸಮಾಜವಾದಿ ಪಕ್ಷವು ಕೇವಲ ನಾಲ್ಕರಿಂದ ಆರು ಸ್ಥಾನಗಳನ್ನು ಮಾತ್ರ ಕೇಳಿದ್ದರೆ, ಜೆಡಿಯು ಕೇವಲ ಒಂದು ಸ್ಥಾನವನ್ನು ಮಾತ್ರ ಕೇಳಿತ್ತು. ಇದಕ್ಕೆ ಕಮಲನಾಥ್ ಒಪ್ಪಿರಲಿಲ್ಲ. ಇದರಿಂದ ಇಂಡಿಯಾ ಬಣದ ನಾಯಕರು ಕೆರಳಿದ್ದರು.

ಕಮಲನಾಥ್ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡದೆ, ಸೋಮವಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದ ಬಗ್ಗೆ ಕಾಂಗ್ರೆಸ್ ನಾಯಕತ್ವವು ಅಸಮಾಧಾನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT