ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಾತನಾಡಲು ನಿರಾಕರಿಸಿದ ಬಾಲಕಿಯ ಕೊಲೆ

Published 2 ಜುಲೈ 2024, 14:33 IST
Last Updated 2 ಜುಲೈ 2024, 14:33 IST
ಅಕ್ಷರ ಗಾತ್ರ

ಜಬಲ್‌ಪುರ: ಮಾತನಾಡಲು ನಿರಾಕರಿಸಿದ ಬಾಲಕಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದಿದೆ.

‘ಆರೋಪಿ ಗಫ್ರಾನ್‌(20) 17 ವರ್ಷದ ಬಾಲಕಿ ತಮನ್ನಾನನ್ನು ಕೊಲೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದು ಈ ಘಟನೆಯ ದೃಶ್ಯಾವಳಿಗಳು ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿವೆ’ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

‘ಕೊಲೆಯಾದ ಬಾಲಕಿಗೆ ಆರೋಪಿಯ ಪರಿಚಯವಿತ್ತು. ಆದರೆ, ಕೆಲ ದಿನಗಳಿಂದ ಆಕೆ ಆತನೊಂದಿಗೆ ಮಾತನಾಡುತ್ತಿರಲಿಲ್ಲ. ಆರೋಪಿ  ಸೋಮವಾರ ಆಕೆಯೊಂದಿಗೆ ಮಾತನಾಡಲು ಪ್ರಯತ್ನಿಸಿದ್ದು ಬಾಲಕಿ ಪ್ರತಿಕ್ರಿಯಿಸದೇ ಇದ್ದಾಗ ಚಾಕುವಿನಿಂದ ಇರಿದು ಕೊಂದಿದ್ದಾನೆ’ ಎಂದು ನಗರ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಶ್‌ ಕುಮಾರ್‌ ರಾಥೋಡ್‌ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT