ಸಾಗರ್/ದೆವಾಸ್, ಮಧ್ಯಪ್ರದೇಶ : ಮಧ್ಯಪ್ರದೇಶದ ಸಾಗರ್ ಮತ್ತು ದೆವಾಸ್‌ನಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಶನಿವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಂದೋರ್‌ನಿಂದ ಚತ್ತಪುರದತ್ತ ವೇಗವಾಗಿ ಚಲಿಸುತ್ತಿದ್ದ ಬಸ್ ನಿವಾರ್ ಗಾಟಿ ಬಳಿ ಪಲ್ಟಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ನಾಲ್ಕು ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವರುಣ್ ನಾಯಕ್ ತಿಳಿಸಿದ್ದಾರೆ.

ಈ ಘಟನೆ ಬೆಳಿಗ್ಗೆ 6 ಗಂಟೆಗೆ ಛಾನ್ಬಿಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಮತ್ತೊಂದು ಅಪಘಾತದಲ್ಲಿ ಬೆಳಿಗ್ಗೆ ರಾಮನಗರ ಹಳ್ಳಿಯ ಸಮೀಪ ಬೈಕ್‌ಗೆ ಕಾರು ಡಿಕ್ಕಿ ಹೊಡೆದು 45–50 ವರ್ಷದ ದಂಪತಿ ಮತ್ತು 18 ವರ್ಷದ ಅವರ ಮಗಳು ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೂರ್ಯಕಾಂತ್ ಶರ್ಮಾ ತಿಳಿಸಿದ್ದಾರೆ.

ದಂಪತಿಯು ಖಾತೆಗಾಂವ್ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಯುವತಿಯು ಆಸ್ಪತ್ರೆಗೆ ತೆರಳುವ ದಾರಿ ಮಧ್ಯೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.