ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಪೊಲೀಸರ ಜೂಜಾಟದ ವಿಡಿಯೊ ಹರಿದಾಟ: 6 ಮಂದಿ ಅಮಾನತು

Published : 16 ಸೆಪ್ಟೆಂಬರ್ 2024, 10:59 IST
Last Updated : 16 ಸೆಪ್ಟೆಂಬರ್ 2024, 10:59 IST
ಫಾಲೋ ಮಾಡಿ
Comments

ಭೋಪಾಲ್: ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾನುವಾರ ಪೊಲೀಸರು ಜೂಜಾಟದಲ್ಲಿ ತೊಡಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ವಿವಿಧ ಪೊಲೀಸ್‌ ಠಾಣೆಗಳಲ್ಲಿ ನಿಯೋಜಿಗೊಂಡಿದ್ದ ಆರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ರೋಹಿತ್ ಕಶ್ವಾನಿ ಹೇಳಿದ್ದಾರೆ.

ಕೋಟ್ವಾಲಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಮನೋಜ್ ಅಹಿರ್ವಾರ್, ರಿತೇಶ್ ಮಿಶ್ರಾ, ಸೂರಜ್ ರಜಪೂತ್ ಮತ್ತು ಭುವನೇಶ್ವರ್ ಅಗ್ನಿಹೋತ್ರಿ ಹಾಗೂ ದೇಹತ್ ಪೊಲೀಸ್ ಠಾಣೆಯ ಅನಿಲ್ ಪಚೌರಿ, ಡಿಗೋರಾ ಪೊಲೀಸ್ ಠಾಣೆಯ ಸಲ್ಮಾನ್ ಖಾನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರೋಹಿತ್ ಮಾಹಿತಿ ನೀಡಿದ್ದಾರೆ.

ವಿಡಿಯೊವನ್ನು ಎಲ್ಲಿ ಮತ್ತು ಯಾವಾಗ ಚಿತ್ರೀಕರಿಸಲಾಯಿತು, ಈ ಘಟನೆ ವೇಳೆ ಇತರೆ ಪೊಲೀಸ್‌ ಸಿಬ್ಬಂದಿ ಸ್ಥಳದಲ್ಲಿ ಇದ್ದರೇ ಎಂಬುವುದನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ. ಈ ರೀತಿಯ ಘಟನೆಗಳಿಂದ ಪೊಲೀಸ್‌ ಇಲಾಖೆಯ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ರೋಹಿತ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT