ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಒಂದೇ ಕುಟುಂಬದ ಆರು ಮಂದಿಗೆ ಗುಂಡಿಕ್ಕಿ ಹತ್ಯೆ

Published 5 ಮೇ 2023, 10:05 IST
Last Updated 5 ಮೇ 2023, 10:05 IST
ಅಕ್ಷರ ಗಾತ್ರ

ಮೊರೆನಾ: ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಆರು ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಿಂದ ವರದಿಯಾಗಿದೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಹಳೆಯ ದ್ವೇಷವೇ ಗುಂಡಿನ ದಾಳಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೇಪಾ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಕೃತ್ಯ ನಡೆದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಚಂಬಲ್ ವಲಯದ ಐಜಿ ಎಸ್. ಸಕ್ಸೇನಾ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT