ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅಪ್ರಾಪ್ತ ವಯಸ್ಸಿನ ಮೂವರಿಂದ ಅತ್ಯಾಚಾರ

ಜಾಲತಾಣಗಳಲ್ಲಿ ಕೃತ್ಯದ ವಿಡಿಯೊ ಹಂಚಿಕೆ: ಇಬ್ಬರು ವಶಕ್ಕೆ
Published 29 ಜುಲೈ 2023, 14:04 IST
Last Updated 29 ಜುಲೈ 2023, 14:04 IST
ಅಕ್ಷರ ಗಾತ್ರ

ಉಜ್ಜೈನಿ: 15 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ವಯಸ್ಸಿನ ಮೂವರು ಅತ್ಯಾಚಾರ ಎಸಗಿ, ನಂತರ ಕೃತ್ಯದ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ, ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಲಸುದಿಯಾ ಜೈಸಿಂಗ್‌ ಗ್ರಾಮದಲ್ಲಿ ಕೃತ್ಯ ನಡೆದಿದೆ. ಜಾಲತಾಣಗಳಲ್ಲಿ ವಿಡಿಯೊ ಹಂಚಿಕೆಯಾದ ನಂತರ ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

‘ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಕುರಿತ ಹೆಚ್ಚಿನ ಮಾಹಿತಿಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಬಿರ್ಲಾ ಗ್ರಾಮ ಪೊಲೀಸ್ ಠಾಣೆ ಉಸ್ತುವಾರಿ ಕರಣ್‌ ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT