ಸಾಗರ್: ನಗ್ನ ವ್ಯಕ್ತಿಗೆ ಗುಂಪೊಂದು ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಮಧ್ಯಪ್ರದೇಶದ ಸಾಗರ್ ನಗರದ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಡಿಯೊದಲ್ಲಿ ಕಳ್ಳನೆಂದು ಆರೋಪಿಸಿ ವ್ಯಕ್ತಿಯನ್ನು ಬಡಿಗೆ ಮತ್ತು ಪೈಪ್‌ಗಳಿಂದ ಮನಬಂದಂತೆ ಥಳಿಸುತ್ತಿರುವ ದೃಶ್ಯವಿದೆ.
‘ವಿಡಿಯೊವನ್ನು ಮೋತಿನಗರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಧರ್ಮ ಕಂಟಾ ಪ್ರದೇಶದಲ್ಲಿ ಚಿತ್ರೀಕರಿಸಲಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.