ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಭೋಪಾಲ್‌ನ ಸುಲ್ತಾನಿಯಾ ಸರ್ಕಾರಿ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ತೆರಳಲು ಅಲ್ಲಿನ ಸಿಬ್ಬಂದಿ ಸಲಹೆ ನೀಡಿದ್ದರು. ಈ ವೇಳೆ ಆಂಬುಲೆನ್ಸ್‌ನಲ್ಲಿ ಮಹಿಳೆಯೊಂದಿಗೆ ಡಾ. ಸಂದೀಪ್ ಮಾರನ್ ತೆರಳಿದ್ದರು. ಆಕೆಗೆ ಮಾರ್ಗ ಮಧ್ಯೆದಲ್ಲಿಯೇ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ತ್ರಿವಳಿ ನವಜಾತ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.