ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತದಲ್ಲಿ ಮೊದಲ ಶಂಕಿತ 'ಎಂಪಾಕ್ಸ್‌' ಪ್ರಕರಣ ಪತ್ತೆ: ಆರೋಗ್ಯ ಸಚಿವಾಲಯ

Published : 8 ಸೆಪ್ಟೆಂಬರ್ 2024, 13:29 IST
Last Updated : 8 ಸೆಪ್ಟೆಂಬರ್ 2024, 13:29 IST
ಫಾಲೋ ಮಾಡಿ
Comments

ನವದೆಹಲಿ: ವಿದೇಶದಿಂದ ಭಾರತಕ್ಕೆ ಬಂದ ವ್ಯಕ್ತಿಯೊಬ್ಬರಿಗೆ 'ಎಂಪಾಕ್ಸ್‌' ಇರುವುದಾಗಿ ಶಂಕಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಶಂಕಿತ ರೋಗಿಯನ್ನು ಆಸ್ಪತ್ರೆಯೊಂದರಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವಾಲಯ ಹೇಳಿದೆ.

ಎಂಪಾಕ್ಸ್‌ ಇದೆಯೇ ಎಂಬುದನ್ನು ಖಚಿತಪಡಿಸಲು ರೋಗಿಯ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಶಿಷ್ಟಾಚಾರದ ಪ್ರಕಾರ ಪ್ರಕರಣವನ್ನು ನಿರ್ವಹಿಸಲಾಗುತ್ತಿದೆ. ಎಂಪಾಕ್ಸ್‌ ಮೂಲ ತಿಳಿಯಲು ಹಾಗೂ ದೇಶದೊಳಗೆ ಅದರ ಪರಿಣಾಮವನ್ನು ನಿರ್ಣಯಿಸಲು ಸಂಪರ್ಕ ಪತ್ತೆ ಹಚ್ಚುವಿಕೆ ಕಾರ್ಯ ನಡೆಯುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಎಂಪಾಕ್ಸ್‌ ಕಾಯಿಲೆ ವೇಗವಾಗಿ ಹರಡುತ್ತಿರುವುದರಿಂದ ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT