ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

MUDA Scam: ವಿರೋಧಿಗಳ ವಿರುದ್ಧ ED ಬಳಕೆ ಯಾವುದೇ ರಹಸ್ಯವಲ್ಲ: ಕಾಂಗ್ರೆಸ್‌

Published : 30 ಸೆಪ್ಟೆಂಬರ್ 2024, 15:58 IST
Last Updated : 30 ಸೆಪ್ಟೆಂಬರ್ 2024, 15:58 IST
ಫಾಲೋ ಮಾಡಿ
Comments

ನವದೆಹಲಿ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಕಿರುಕುಳ, ಸೇಡು ತೀರಿಸಿಕೊಳ್ಳಲು ಜಾರಿ ನಿರ್ದೇಶನಾಲಯ (ಇ.ಡಿ) ಒಂದು ಸಾಧನವಾಗಿರುವುದು ರಹಸ್ಯವೇನೂ ಅಲ್ಲ’ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ ಎಫ್‌ಐಆರ್‌ ದಾಖಲಿಸಿಕೊಂಡ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.

‘2023ರ ಮೇನಲ್ಲಿ ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಜನರು ಸಾರಸಗಟಾಗಿ ತಿರಸ್ಕರಿಸಿದ್ದರು. ಆ ಅವಮಾನವನ್ನು ಅವರು ಮರೆತಿಲ್ಲ. ಹೀಗಾಗಿ ಇಂಥ ಸೇಡು ತೀರಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಅವರ ಹಾಗೂ ಜಾರಿ ನಿರ್ದೇಶನಾಲಯದ ಷಡ್ಯಂತ್ರ ಶೀಘ್ರದಲ್ಲಿ ಬಹಿರಂಗಗೊಳ್ಳಲಿದೆ ಎಂಬ ವಿಶ್ವಾಸ ಕಾಂಗ್ರೆಸ್‌ನದ್ದು. ಈ ಎಲ್ಲಾ ಆರೋಪಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥವಾಗಿ ಎದುರಿಸಲಿದ್ದಾರೆ. ಹೀಗಾಗಿ ನಾವು ಯಾರೂ ಭಯ ಪಡುವ ಅಗತ್ಯವಿಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT