ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ

Published 29 ಮಾರ್ಚ್ 2024, 14:04 IST
Last Updated 29 ಮಾರ್ಚ್ 2024, 14:04 IST
ಅಕ್ಷರ ಗಾತ್ರ

ಬಾಂಡಾ: ಉತ್ತರಪ್ರದೇಶದ ಬಾಂಡಾ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಬಿಗಿ ಭದ್ರತೆಯಲ್ಲಿ ಗಾಜಿಪುರದಲ್ಲಿರುವ ಹುಟ್ಟೂರಿಗೆ ಕರೆತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹ ಹೊತ್ತೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ಬಿಗಿ ಭದ್ರತೆ ಒದಗಿಸಲಾಗಿದ್ದು, 26 ಬೆಂಗಾವಲು ವಾಹನ ಮತ್ತು 24 ಪೊಲೀಸ್‌ ವಾಹನಗಳೊಂದಿಗೆ ಮುಖ್ತಾರ್‌ ಮೃತದೇಹವನ್ನು ತರಲಾಗುತ್ತಿದೆ. 

ಗಾಜಿಪುರ ಮತ್ತು ಮೌಊ ಪ್ರದೇಶದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಮನೆಯ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯ ಹೊತ್ತಿಗೆ ಆಂಬುಲೆನ್ಸ್‌ ಗಾಜಿಪುರ ತಲುಪಲಿದ್ದು ರಾತ್ರಿ ಅಥವಾ ಶನಿವಾರ ಬೆಳಿಗ್ಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ತಾರ್‌ ಕುಟುಂಬ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT