ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

TMC ನಾಯಕ, ರೈಲ್ವೆ ಮಾಜಿ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ

Published 6 ಜುಲೈ 2024, 9:34 IST
Last Updated 6 ಜುಲೈ 2024, 9:34 IST
ಅಕ್ಷರ ಗಾತ್ರ

ಕೋಲ್ಕತ್ತ: ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಟಿಎಂಸಿ ನಾಯಕ, ರೈಲ್ವೆ ಮಾಜಿ ಸಚಿವ ಮುಕುಲ್ ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಇಲ್ಲಿನ ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

'ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಆದರೆ ಸ್ಥಿತಿ ಗಂಭೀರವಾಗಿದೆ. ನಮ್ಮ ವೈದ್ಯರು ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ' ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ರಾಯ್‌ ತೃಣಮೂಲ ಕಾಂಗ್ರೆಸ್‌ನ ಸ್ಥಾಪಕ ಸದಸ್ಯರಲ್ಲಿ ಒಬ್ಬರು. ಯುಪಿಎ ಸರ್ಕಾರದ 2ನೇ ಅವಧಿಯಲ್ಲಿ (2012) ರೈಲ್ವೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2017ರಲ್ಲಿ ಅವರು ಬಿಜೆಪಿಗೆ ಸೇರಿದ್ದರು. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಬಳಿಕ ಟಿಎಂಸಿಗೆ ಮರಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT