ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್ಶಿಪ್ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್ನ 10ನೇ ಮಹಡಿಯಲ್ಲಿ ತಡರಾತ್ರಿ 12.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬಳಿಕ 11 ಮತ್ತು 12ನೇ ಮಹಡಿಗೂ ಬೆಂಕಿ ವ್ಯಾಪಿಸಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವಘಡದಲ್ಲಿ 6 ವರ್ಷದ ಬಾಲಕಿ, ಇಬ್ಬರು ಮಹಿಳೆಯರು, ಒಬ್ಬ ಪುರುಷ ಕೊನೆಯುಸಿರೆಳೆದಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಳಿಗ್ಗೆ 4 ಗಂಟೆ ಹೊತ್ತಿಗೆ ಬೆಂಕಿಯನ್ನು ನಂದಿಸಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.