ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆಯು (ಬಿಎಂಸಿ) ಮುಂದಿನ ವಾರದಲ್ಲಿ ನಗರದಾದ್ಯಂತ ಮರಗಳ ಗಣತಿಯನ್ನು ಆರಂಭಿಸಲಿದೆ.

ಎಂಟು ವರ್ಷಗಳ ನಂತರ ಈ ಗಣತಿ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು, ಗಣತಿ ಕಾರ್ಯ ಪೂರ್ಣಗೊಳ್ಳಲು ಒಂದೂವರೆ ವರ್ಷ ತೆಗೆದುಕೊಳ್ಳಲಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ 2018ರಲ್ಲಿ ಮರಗಳ ಗಣತಿ ನಡೆಸಲಾಗಿತ್ತು. ಮಹಾನಗರದಾದ್ಯಂತ ಒಟ್ಟು 33.7 ಲಕ್ಷ ಮರಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಮಾನ್ಯವಾಗಿ ಮುಂಬೈನಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಮರಗಳ ಗಣತಿ ನಡೆಯುತ್ತದೆ. ಆದರೆ ಕೋವಿಡ್ ಕಾರಣದಿಂದ ಈ ಬಾರಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಗಾರು ಆರಂಭಕ್ಕೂ ಮುನ್ನ ಸುಮಾರು 45,000ಕ್ಕೂ ಹೆಚ್ಚು ಮರಗಳ ಕೊಂಬೆಗಳನ್ನು ಕತ್ತರಿಸಲಾಗುವುದು, ತೀರ ಅಪಾಯಕಾರಿ ಮರಗಳನ್ನು ವೈಜ್ಞಾನಿಕವಾಗಿ ದೊಡ್ಡ ದೊಡ್ಡ ಕೊಂಬೆಗಳನ್ನು ಕತ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.