ಮುಂಬೈ: ಮುಂಬೈ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು.

ಎಡಬಿಡದೆ ಮಳೆ ಸುರಿದ ಕಾರಣ ಲೋಕಲ್ ರೈಲುಗಳು ಮತ್ತು ಕೆಲವು ಬಸ್ಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಮುಂಬೈ ನಗರದಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ‘ರೆಡ್ ಅಲರ್ಟ್’ ಘೋಷಣೆ ಮಾಡಿದೆ. ನಗರದ ಹಲವು ಕಡೆಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಶನಿವಾರ ಮುಂಜಾನೆವರೆಗೆ 200ಮಿಲಿ ಮೀಟರ್ಗಿಂತ ಅಧಿಕ ಮಳೆಯಾಗಿದೆ ಎಂದು ಐಎಂಡಿ ತಿಳಿಸಿದೆ. ವಿಖ್ರೋಲಿಯಲ್ಲಿ 248.5 ಮಿ.ಮೀ, ಸಾಂತಾಕ್ರೂಜ್ನಲ್ಲಿ 232.5 ಮಿ.ಮೀ, ಸಿಯೋನ್ನಲ್ಲಿ 221ಮಿ.ಮೀ, ಜುಹುನಲ್ಲಿ 208 ಮಿ.ಮೀ ಮಳೆಯಾಗಿದೆ ಎಂದು ತಿಳಿಸಿದೆ.

ವಿಖ್ರೋಲಿ ಪಾರ್ಕ್ ಪ್ರದೇಶದಲ್ಲಿ ಭಾರಿ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ, ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನಾಗರಿಕರಿಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.