ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಬಂದರಿನಲ್ಲಿ ಹುಸಿ ಬಾಂಬ್‌ ಬೆದರಿಕೆ– ವ್ಯಕ್ತಿ ಬಂಧನ

Last Updated 25 ಫೆಬ್ರುವರಿ 2023, 17:16 IST
ಅಕ್ಷರ ಗಾತ್ರ

ಮುಂಬೈ: ದಕ್ಷಿಣ ಮುಂಬೈನ ವಿವಿಧೆಡೆ ಸ್ಫೋಟಿಸುವ ಉದ್ದೇಶದಿಂದ ಬಂದರಿನಲ್ಲಿ ಸ್ಫೋಟಕಗಳನ್ನು ತಂದಿಡಲಾಗಿದೆ. ಅದರೊಂದಿಗೆ 90 ಕೆ.ಜಿ ಮೆಫೆಡ್ರೋನ್‌ ಮಾದಕವಸ್ತುವನ್ನೂ ಸಾಗಿಸಲಾಗಿದೆ ಎಂದು ಪೊಲೀಸ್‌ ನಿಯಂತ್ರಣ ಕೊಠಡಿಗೆ ಹುಸಿ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ಆರೋಪಿಯು ಶುಕ್ರವಾರ ದಕ್ಷಿಣದ ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಮಾದಕ ವಸ್ತು ಮತ್ತು ಸ್ಫೋಟಕಗಳು ಗುರುವಾರವೇ ಬಂದರಿಗೆ ತಲುಪಿವೆ ಎಂದು ಹೇಳಿದ್ದ. ಕೂಡಲೇ ಬಂದರಿನ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿತ್ತು. ಆದರೆ ಅಲ್ಲಿ ಅಂಥ ಯಾವುದೇ ವಸ್ತುಗಳು ಪತ್ತೆಯಾಗಿರಲಿಲ್ಲ. ಬಳಿಕ ಕರೆ ಮಾಡಿದ ಮೊಬೈಲ್‌ ಸಂಖ್ಯೆಯ ಜಾಡು ಹಿಡಿದು ಪಾಲ್ಘಾರ್‌ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ತಿಳಿಸಿದ್ದಾರೆ.

ಸದ್ಯ ಆರೋಪಿ ತಪ್ಪೊಪ್ಪಿಕೊಂಡಿದ್ದು, ಸುಳ್ಳು ಮಾಹಿತಿ ಹಂಚಿಕೆ, ಬೆದರಿಕೆ ಮತ್ತಿತರ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 506(3), 182, 505(1), 179ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT