ಮುಂಬೈ: ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಮಿತಿಮೀರಿ ಮಾದಕ ದ್ರವ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಲ್ಲಿನ ಗೋರೆಗಾಂವ್ ನೆಸ್ಕೊ ಕೇಂದ್ರದಲ್ಲಿ ಏಪ್ರಿಲ್ 11ರ ರಾತ್ರಿ ಸಂಗೀತ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಂಗೀತ ಸಮಾರಂಭದಲ್ಲಿ ಸುಮಾರು 4 ಸಾವಿರ ಜನರು ಭಾಗವಹಿಸಿದ್ದರು. ಇವರು ತಲಾ ₹ 2 ಸಾವಿರ ಪ್ರವೇಶ ಶುಲ್ಕ ಪಾವತಿಸಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಂದು ರಾತ್ರಿ 12 ಗಂಟೆ ಸುಮಾರಿಗೆ ಮೂವರು ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ 24 ವರ್ಷದ ಯುವತಿ ಮತ್ತು 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ. ಮತ್ತೊರ್ವ ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಅತಿಯಾದ ಡ್ರಗ್ಸ್ ಸೇವನೆ ಸಾವಿಗೆ ಕಾರಣ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಡ್ರಗ್ಸ್ ಸರಬರಾಜು ಮಾಡಿದ ವ್ಯಕ್ತಿ ಕೂಡ ವಿದ್ಯಾರ್ಥಿಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಆರೋಪಿಯಿಂದ ಆರು-ಏಳು ಡ್ರಗ್ಸ್ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ನಿಷೇಧಿತ ಎಂಡಿಎಂಎ ಅಂಶ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.