ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Mumbai BMW Crash | ಪರಾರಿಯಾಗಿದ್ದ ಕಾರು ಚಾಲಕನ ಬಂಧನ

Published 9 ಜುಲೈ 2024, 11:30 IST
Last Updated 9 ಜುಲೈ 2024, 11:30 IST
ಅಕ್ಷರ ಗಾತ್ರ

ಮುಂಬೈ: ಐಷಾರಾಮಿ ಬಿಎಂಡಬ್ಲ್ಯು ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ಇಂದು (ಮಂಗಳವಾರ) ಬಂಧಿಸಿದ್ದಾರೆ.

24 ವರ್ಷದ ಮಿಹಿರ್ ಶಾ ಬಂಧಿತ ವ್ಯಕ್ತಿ. ಈ ಮೊದಲು ಚಾಲಕನ ಬಂಧನಕ್ಕೆ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ (ಎಲ್‌ಒಸಿ) ಜಾರಿ ಮಾಡಿದ್ದರು. ಆರೋಪಿಯ ಪತ್ತೆಗಾಗಿ ಮುಂಬೈ ಪೊಲೀಸ್ 11 ತಂಡಗಳನ್ನು ರಚಿಸಿತ್ತು.

ವರ್ಲಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಘಟನೆ ನಡೆದಿತ್ತು. ಘಟನೆಯಲ್ಲಿ ಕಾವೇರಿ ನಖವಾ ಮೃತಪಟ್ಟಿದ್ದರೆ ಅವರ ಪತಿ ಪ್ರದೀಕ್ ನಖವಾ ಗಾಯಗೊಂಡಿದ್ದರು.

ಶಿವಸೇನಾ ಪಕ್ಷದ ಸ್ಥಳೀಯ ಮುಖಂಡ ರಾಜೇಶ್ ಶಾ ಅವರ ಪುತ್ರ ಮಿಹಿರ್ ಶಾ ಕಾರು ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ.

ಅಪಘಾತದ ನಂತರ ಮಿಹಿರ್ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪದ ಮೇಲೆ ಮಿಹಿರ್ ತಂದೆ ರಾಜೇಶ್ ಶಾ ಮತ್ತು ಅವರ ಚಾಲಕ ರಾಜೇಂದ್ರ ಸಿಂಗ್ ಬಿಡಾವತ್ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT