ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾ.9ರವರೆಗೆ ಮುಂಬೈ ಪೊಲೀಸರ ವಶಕ್ಕೆ ಭೂಗತಪಾತಕಿ ರವಿ ಪೂಜಾರಿ

Last Updated 23 ಫೆಬ್ರುವರಿ 2021, 11:40 IST
ಅಕ್ಷರ ಗಾತ್ರ

ಮುಂಬೈ: ಮುಂಬೈನಲ್ಲಿ 2016ರಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ಆರೋಪಿ ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿನಿಂದ ಕರೆತಂದ ಮುಂಬೈ ಪೊಲೀಸರು, ಇಲ್ಲಿನ ವಿಶೇಷ ನ್ಯಾಯಾಲಯದ ಎದುರು ಮಂಗಳವಾರ ಹಾಜರು ಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಲಯ, ರವಿ ಪೂಜಾರಿಯನ್ನು ಮಾ.9ರವರೆಗೆ ವಿಚಾರಣೆಗಾಗಿ ಪೊಲೀಸರ ವಶಕ್ಕೆ ನೀಡಿದೆ.

ಹಲವು ವರ್ಷಗಳ ಕಾಲ ವಿದೇಶದಲ್ಲಿ ಅಡಗಿಕೊಂಡಿದ್ದ ರವಿ ಪೂಜಾರಿಯನ್ನು ಕಳೆದ ವರ್ಷ ಫೆಬ್ರವರಿ ತಿಂಗಳಿನಲ್ಲಿ ಕರ್ನಾಟಕ ನ್ಯಾಯಾಲಯದ ಅನುಮತಿ ಮೇರೆಗೆ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಕರೆ ತಂದು, ಬೆಂಗಳೂರಿನ ಜೈಲಿನಲ್ಲಿ ಇರಿಸಲಾಗಿತ್ತು.

ಶನಿವಾರ ಬೆಂಗಳೂರಿಗೆ ಬಂದ ಮುಂಬೈ ಪೊಲೀಸರ ತಂಡ, 2016ರ ಅಕ್ಟೋಬರ್ 21ರಂದು ವಿಲೆ ಪಾರ್ಲೆಯಲ್ಲಿ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಪೂಜಾರಿಯನ್ನು ತಮ್ಮ ವಶಕ್ಕೆ ನೀಡಬೇಕೆಂದು ಕರ್ನಾಟಕದ ನ್ಯಾಯಾಲವೊಂದರಲ್ಲಿ ಮನವಿ ಮಾಡಿದ್ದರು. ಕರ್ನಾಟಕದ ನ್ಯಾಯಾಲಯ ಪೂಜಾರಿಯನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲು ಅನುಮತಿ ನೀಡಿತ್ತು.

ಮಂಗಳವಾರ ಬೆಳಿಗ್ಗೆ ರಸ್ತೆ ಮಾರ್ಗವಾಗಿ ಬೆಂಗಳೂರಿನಿಂದ ಮುಂಬೈಗೆ ರವಿ ಪೂಜಾರಿಯನ್ನು ಕರೆತರಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಲ್ಲಿ ನಡೆದ ಗುಂಡಿನ ದಾಳಿ ಘಟನೆಯನ್ನು ಆಧರಿಸಿ ಪೂಜಾರಿ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಎಂಸಿಒಸಿಎ) ಪ್ರಕರಣವನ್ನು ದಾಖಲಿಸಲಾಗಿತ್ತು.

ಈ ಕುರಿತು ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಪೂಜಾರಿಯನ್ನು ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಿದರು. ವಿಶೇಷ ನ್ಯಾಯಾಧೀಶ ಡಿ.ಇ. ಕೊಥಾಲಿಕರ್, ಪೂಜಾರಿಯನ್ನು ಮಾ. 9 ರವರೆಗೆ ಮುಂಬೈ ಪೊಲೀಸ್ ವಶಕ್ಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT