ಮುಂಬೈ: ನಗರದ ಪೊವೈ ಪ್ರದೇಶದಲ್ಲಿರುವ 'ರಾ ಸ್ಟುಡಿಯೊ'ದಲ್ಲಿ ಹಲವು ಮಕ್ಕಳನ್ನು ಒತ್ತೆಯಿರಿಸಿಕೊಂಡಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಮಾಧ್ಯಮಗಳ ವರದಿ ಪ್ರಕಾರ, ಬಂಧಿತನನ್ನು ರೋಹಿತ್ ಆರ್ಯ ಎಂದು ಗುರುತಿಸಲಾಗಿದೆ. ಪೊಲೀಸರು 20ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದ್ದಾರೆ.

ಉನ್ನತ ಪೊಲೀಸ್ ಅಧಿಕಾರಿಗಳು, ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ, 'ರಾ ಸ್ಟುಡಿಯೊ' ಪ್ರದೇಶಕ್ಕೆ ಧಾವಿಸಿದ್ದಾರೆ.

ಶಂಕಿತನ ವಶದಲ್ಲಿದ್ದ ಮಕ್ಕಳೆಲ್ಲ 15ರಿಂದ 20 ವರ್ಷ ವಯಸ್ಸಿನವರು ಎನ್ನಲಾಗಿದೆ.

ಇದಕ್ಕೂ ಮೊದಲು, ರೋಹಿತ್ ಆರ್ಯ ಎಂಬುದಾಗಿ ಹೇಳಿಕೊಂಡಿದ್ದ ವ್ಯಕ್ತಿ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

'ಆತ್ಮಹತ್ಯೆ ಮಾಡಿಕೊಳ್ಳುವ ಬದಲು ನಾನು ಸರಿಯಾಗಿ ಯೋಜಿಸಿ, ಕೆಲವು ಮಕ್ಕಳನ್ನು ಒತ್ತೆ ಇರಿಸಿಕೊಂಡಿದ್ದೇನೆ. ನನ್ನಲ್ಲಿ ಹೆಚ್ಚೇನೂ ಬೇಡಿಕೆಗಳಿಲ್ಲ. ಕೆಲವು ಪ್ರಶ್ನೆಗಳಿವೆ. ಅವು ತುಂಬಾ ಸರಳವಾದ, ನೈತಿಕ ಮತ್ತು ಸೈದ್ಧಾಂತಿಕವಾದವು. ಕೆಲವರೊಂದಿಗೆ ಮಾತನಾಡಲು ಬಯಸುತ್ತೇನೆ. ಅದನ್ನು ಬಿಟ್ಟರೆ ನನಗೆ ಬೇರೇನೂ ಬೇಡ. ನಾನು ಭಯೋತ್ಪಾದಕನಲ್ಲ. ಹಣಕ್ಕಾಗಿ ಬೇಡಿಕೆ ಇಡುತ್ತಿಲ್ಲ. ನಿಮ್ಮ ಕಡೆಯಿಂದ ಒಂದೇ ಒಂದು ತಪ್ಪಾದರೂ, ಎಲ್ಲರಿಗೂ ತೊಂದರೆ ಮಾಡಿ, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದು ಆ ವ್ಯಕ್ತಿ ಹೇಳಿರುವುದು ವಿಡಿಯೊದಲ್ಲಿದೆ.

ಆರೋಪಿ ಕುರಿತ ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.