ಮುಂಬೈ: ಸುಮಾರು 320 ದಿನಗಳ ಬಳಿಕ ಮುಂಬೈನ ಉಪನಗರ ರೈಲಿನಲ್ಲಿ ಪ್ರಯಾಣಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

ಸೋಮವಾರ ಮುಂಜಾನೆಯಿಂದ ನಿಗದಿತ ಸಮಯದಲ್ಲಿ ಸಾರ್ವಜನಿಕರು ರೈಲಿನಲ್ಲಿ ಸಂಚರಿಸಬಹುದು ಎಂದು ರೈಲ್ವೆ ಇಲಾಖೆ ಹೇಳಿದೆ.

'ಜನ ಸಂದಣಿಯನ್ನು ನಿಯಂತ್ರಿಸಲು ಸ್ಥಳೀಯ ಪೊಲೀಸರ ಸಹಾಯವನ್ನು ಪಡೆಯಲಾಗುವುದು. ಪ್ರವೇಶ ಮತ್ತು ನಿರ್ಗಮನ ದ್ವಾರಗಳು, ಟಿಕೆಟ್ ಕೌಂಟರ್‌ಗಳು ಮೊದಲಿನಂತೆ ತೆರೆದಿರಲಿವೆ" ಎಂದು ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಶಿವಾಜಿ ಸೂತಾರ್ ಅವರು ಹೇಳಿದರು.

'ದಿನದ ಮೊದಲ ರೈಲು ಆರಂಭಗೊಂಡ ಸಮಯದಿಂದ ಬೆಳಿಗ್ಗೆ 7 ಗಂಟೆಯವರೆಗೆ, ಮಧ್ಯಾಹ್ನ 12 ರಿಂದ ಸಂಜೆ 4ರ ತನಕ, ರಾತ್ರಿ 9 ರಿಂದ ಮುಕ್ತಾಯದ ಸಮಯದವರೆಗೆ ಉಪನಗರ ರೈಲುಗಳಲ್ಲಿ ಸಾರ್ವಜನಿಕರಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ಕೊಡಲಾಗಿದೆ'ಎಂದು ಅವರು ತಿಳಿಸಿದರು.

‘ಮಹಾರಾಷ್ಟ್ರ ಸರ್ಕಾರ ಮತ್ತು ರೈಲ್ವೆ ಸಚಿವಾಲಯವು ಅನುಮತಿ ನೀಡಿದ ಅಗತ್ಯ ಸೇವೆಯ ಸಿಬ್ಬಂದಿಗೆ ಮಾತ್ರ ಬೆಳಿಗ್ಗೆ 7 ರಿಂದ 12, ಸಂಜೆ 4 ರಿಂದ 9 ತನಕ ಪಯಣಿಸಲು ಅವಕಾಶವಿದೆ’ ಎಂದು ಅವರು ಮಾಹಿತಿ ನೀಡಿದರು.

'ರೈಲು ಪ್ರಯಾಣದ ವೇಳೆ ಮುಖಗವಸು ಧರಿಸುವುದು ಕಡ್ಡಾಯವಾಗಿದೆ. ಈ ವೇಳೆ ಕೋವಿಡ್–19 ನಿಯಮವನ್ನು ಉಲ್ಲಂಘಿಸಿದವರಿಗೆ ದಂಡವನ್ನು ವಿಧಿಸಲಾಗುವುದು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.