ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈಗೆ 14 ಶಸ್ತ್ರಸಜ್ಜಿತ ಭಯೋತ್ಪಾದಕರು 400 ಕೆ.ಜಿ. ಆರ್ಡಿಎಕ್ಸ್ ತುಂಬಿದ ವಾಹನಗಳೊಂದಿಗೆ ಪ್ರವೇಶಿಸಿದ್ದಾರೆ ಎಂಬ ವಾಟ್ಸ್ಆ್ಯಪ್ ಸಂದೇಶವನ್ನು ಆಧರಿಸಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಗಣೇಶ ಚತುರ್ಥಿ ಕಳೆದು 10 ದಿನಗಳ ನಂತರ ಆಚರಿಸುವ ಅನಂತ ಚತುರ್ಥಿಗೆ ಭದ್ರತೆ ಒದಗಿಸಲು ಪೊಲೀಸರು ಸಾಕಷ್ಟು ಸಿದ್ಧತೆ ನಡೆದಿದೆ. ಇದೇ ಸಂದರ್ಭದಲ್ಲಿ ಪೊಲೀಸ್ ನಿಯಂತ್ರಣ ಕೊಠಡಿಯ ಮೊಬೈಲ್ ಸಂಖ್ಯೆಗೆ ವಾಟ್ಸ್ಆ್ಯಪ್ ಸಂದೇಶ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಒಟ್ಟು 34 ವಾಹನಗಳಲ್ಲಿ 400 ಕೆ.ಜಿ. ಆರ್ಡಿಎಕ್ಸ್ ತುಂಬಿ ಕಳುಹಿಸಲಾಗಿದೆ. ಇದರೊಂದಿಗೆ 14 ಭಯೋತ್ಫಾದಕರು ಮುಂಬೈ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಆ ಸಂದೇಶದಲ್ಲಿದೆ. ಸಂದೇಶದಲ್ಲಿ ‘ಲಷ್ಕರ್ ಎ ಜಿಹಾದಿ’ ಎಂಬ ಸಂಘಟನೆಯ ಹೆಸರಿದೆ. ಈ ಕುರಿತು ಅಪರಾಧ ವಿಭಾಗ ತನಿಖೆ ಆರಂಭಿಸಿದೆ. ಭಯೋತ್ಪಾದನಾ ನಿಗ್ರಹ ದಳ ಮತ್ತು ಇತರ ಭದ್ರತಾ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ’ ಎಂದಿದ್ದಾರೆ.

‘ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಜತೆಗೆ ಮುಂಬೈನ ವಿವಿಧೆಡೆ ಕೂಂಬಿಂಗ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಸಂದೇಶ ಬಂದ ಸಂಖ್ಯೆಯ ಮೂಲವನ್ನೂ ಪತ್ತೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇಂಥ ಯಾವುದೇ ವದಂತಿಗೆ ಕಿವಿಗೊಡದಂತೆ ಮುಂಬೈನ ಜನರಿಗೆ ಮನವಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.