ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮುಂಬೈನ ಆರು ಕಡೆ ಬಾಂಬ್‌': ಸಂಚಾರ ಪೊಲೀಸರಿಗೆ ಬೆದರಿಕೆ ಸಂದೇಶ

Published 2 ಫೆಬ್ರುವರಿ 2024, 3:15 IST
Last Updated 2 ಫೆಬ್ರುವರಿ 2024, 3:15 IST
ಅಕ್ಷರ ಗಾತ್ರ

ಮುಂಬೈ: ನಗರದ ಸಂಚಾರ ನಿಯಂತ್ರಣ ಕೊಠಡಿಗೆ ಶುಕ್ರವಾರ ಬೆಳಗ್ಗೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿಯು ಕಳುಹಿಸಿರುವ 'ಟೆಕ್ಸ್ಟ್‌' ಸಂದೇಶದಲ್ಲಿ, 'ಮಂಬೈನ ಆರು ಸ್ಥಳಗಳಲ್ಲಿ ಬಾಂಬ್‌ ಇಡಲಾಗಿದೆ' ಎಂದು ತಿಳಿಸಲಾಗಿದೆ. ಪೊಲೀಸರು ಈ ಮಾಹಿತಿ ನೀಡಿರುವುದಾಗಿ ಎಂದು ಎಎನ್‌ಐ ವರದಿ ಮಾಡಿದೆ.

ತಕ್ಷಣವೇ ಕಾರ್ಯಪ್ರವೃತ್ತರಾಗಿರುವ ಮುಂಬೈ ಪೊಲೀಸರು, ಸಂದೇಶ ಕಳುಹಿಸಿದ ವ್ಯಕ್ತಿ ಪತ್ತೆಗೆ  ತನಿಖೆ ಆರಂಭಿಸಿದ್ದಾರೆ. ಭದ್ರತಾ ಪಡೆಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT