ಮುಂಬೈ : ಮುಂಬೈನಲ್ಲಿ 18ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ ಅಭಿಯಾನವನ್ನು ಮುಂದಿನ ನಿರ್ದೇಶನದ ವರೆಗೂ ಸ್ಥಗಿತಗೊಳಿಸಲಾಗಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಪ್ರಕಟಿಸಿದೆ.

ಕೋವಿಡ್ ಲಸಿಕೆಯ ಕೊರತೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು 18ರಿಂದ 44 ವರ್ಷ ವಯೋಮಿತಿಯ ನಾಗರಿಕರಿಗೆ ಕೋವಿಡ್ ಲಸಿಕೆಯ ನೀಡಿಕೆಯನ್ನು ಸ್ಥಗಿತಗೊಳಿಸಿತ್ತು. ಅಲ್ಲದೆ 45 ವರ್ಷ ದಾಟಿದವರಿಗೆ ಎರಡನೇ ಲಸಿಕೆ ನೀಡಲು ಆದ್ಯತೆ ನೀಡಲಾಗಿದೆ.

ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ ಬಿಎಂಸಿ, 60ವರ್ಷಕ್ಕೂ ಮೇಲ್ಪಟ್ಟವರಿಗೆ ಮೂರು ದಿನಗಳ ವರೆಗೆ ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು.

ಇದನ್ನೂ ಓದಿ:ಕೋವಿಡ್ ಎರಡನೇ ಅಲೆ ನಿಯಂತ್ರಣ: ‘ಮುಂಬೈ ಮಾದರಿ’ಗೆ ‘ಸುಪ್ರೀಂ’ ಮೆಚ್ಚುಗೆ

ಈ ಕುರಿತು ಟ್ವೀಟ್ ಮಾಡಿರುವ ಪರಿಸರ ಸಚಿವ ಆದಿತ್ಯ ಠಾಕ್ರೆ ಎರಡು ಲಸಿಕೆಗಳ ನಡುವಣ ನಿಗದಿತ ಅಂತರವನ್ನು ಮೀರಿದವರಿಗೆ ಮುಂಬರುವ ವಾರದಲ್ಲಿ ನಾವು ಎರಡನೇ ಲಸಿಕೆ ನೀಡುವುದು ಬಹಳ ಮುಖ್ಯವೆನಿಸಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲೂ 18ರಿಂದ 44 ವರ್ಷ ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನವನ್ನು ಮೇ 15ರಿಂದ ತಾತ್ಕಾಲಿಕವಾಗಿ ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.