ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಕ್ಕಾಬಾರ್ ಮೇಲೆ ದಾಳಿ: ಬಿಗ್‌ಬಾಸ್ ವಿಜೇತ ಮುನಾವರ್ ಫಾರೂಕಿ ಸೇರಿ 14 ಮಂದಿ ಬಂಧನ

Published 27 ಮಾರ್ಚ್ 2024, 4:34 IST
Last Updated 27 ಮಾರ್ಚ್ 2024, 4:34 IST
ಅಕ್ಷರ ಗಾತ್ರ

ಮುಂಬೈ: ನಗರದ ಹುಕ್ಕಾ ಪಾರ್ಲರ್‌ ಮೇಲೆ ನಡೆದ ದಾಳಿಯಲ್ಲಿ ಹಾಸ್ಯ ಕಲಾವಿದ ಹಾಗೂ ಬಿಗ್ ಬಾಸ್ ವಿಜೇತ ಮುನಾವರ್ ಫಾರೂಕಿ ಸೇರಿದಂತೆ 14 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮವಾಗಿ ಹುಕ್ಕಾ ಪಾರ್ಲರ್ ನಡೆಸುತ್ತಿದ್ದ ಅರೋಪದ ಮೇಲೆ ದಾಳಿ ನಡೆಸಲಾಗಿದ್ದು, ₹4,400 ನಗದು ಹಾಗೂ ₹13,500 ಮೌಲ್ಯದ ಒಂಬತ್ತು ಹುಕ್ಕಾ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಾರೂಕಿ ಸೇರಿದಂತೆ ಬಂಧಿತರ ವಿರುದ್ಧ ಸಿಗರೇಟ್‌ ಮತ್ತು ತಂಬಾಕು ಉತ್ಪನ್ನಗಳ ಮಸೂದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜತೆಗೆ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

32 ವರ್ಷದ ಫಾರೂಕಿ ಅವರು ಯೂಟ್ಯೂಬ್‌ನಲ್ಲಿ ಹಾಸ್ಯ ಕಲಾವಿದರಾಗಿ, ರ್‍ಯಾಪರ್‌ ಆಗಿ ಜನಪ್ರಿಯರಾಗಿದ್ದಾರೆ. 2021ರಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಫಾರೂಕಿ ಅವರು 35 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT