ಕೋಲ್ಕತ್ತ: ಒಡಿಶಾ ಮೂಲದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿಸುವುದಾಗಿ ಬಿಜೆಪಿಯು ಮೊದಲೇ ಹೇಳಿದಿದ್ದರೆ ಬೆಂಬಲಿಸುವ ಬಗ್ಗೆ ಯೋಚಿಸುತ್ತಿದ್ದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತ್ಯಂತರಗಳು ಮುರ್ಮು ಅವರ ಗೆಲುವಿನ ಸಾಧ್ಯತೆಯನ್ನು ಮತ್ತಷ್ಟು ಸುಲಭವಾಗಿಸಿವೆ. ಎನ್‌ಡಿಎಯ ಸಂಖ್ಯೆಯು ಹೆಚ್ಚಾಗಿದೆ ಎಂದು ಬ್ಯಾನರ್ಜಿ ಹೇಳಿದರು. ‘ಒಮ್ಮತದ ಅಭ್ಯರ್ಥಿಯು ದೇಶಕ್ಕೆ ಯಾವಾಗಲೂ ಹಿತ’ ಎಂದೂ ಅವರು ಇದೇ ವೇಳೆ ಹೇಳಿದರು.

‘ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮು ಹೆಸರನ್ನು ಘೋಷಿಸುವ ಮೊದಲು ಬಿಜೆಪಿ ನಮ್ಮ ಸಲಹೆಯನ್ನು ಕೇಳಿದ್ದರೆ, ನಾವು ಅದನ್ನು ಪರಿಗಣಿಸಬಹುದಿತ್ತು. ಈಗ ವಿರೋಧ ಪಕ್ಷಗಳು ಏನು ತೀರ್ಮಾನಿಸುತ್ತವೆಯೋ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ’ ಎಂದು ಮಮತಾ ಅವರು ತಿಳಿಸಿದರು.

ಕಾಂಗ್ರೆಸ್, ಟಿಎಂಸಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಘೋಷಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.